ರಾಜಕೀಯ

ಕಾಂಗ್ರೆಸ್‌ನಿಂದ ಬಾಂಬ್‌ ಸ್ಫೋಟದ ತನಿಖೆ ತಿರುಚುವ ಪ್ರಯತ್ನ :   ಆರ್‌.ಅಶೋಕ

  • ರಿಯಲ್‌ ಹಿಟ್ಲರ್‌ ಎಂದರೆ ಅದು ಕಾಂಗ್ರೆಸ್‌ ಮಾತ್ರ : ಆರ್‌.ಅಶೋಕ್‌

ಬೆಂಗಳೂರು: ಬಾಂಬ್‌ ಸ್ಫೋಟದ ತನಿಖೆಯನ್ನು ಕಾಂಗ್ರೆಸ್‌ ನಾಯಕರು, ಸಚಿವರು ತಿರುಚಲು ಯತ್ನಿಸಿದ್ದಾರೆ. ಆದರೆ ಎನ್‌ಐಎ ತಂಡ ಸೂಕ್ತ ತನಿಖೆ ನಡೆಸಿರುವುದು ಅಭಿನಂದನೀಯ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಯೋತ್ಪಾದಕ ದಾಳಿಯಿಂದ ರಾಜ್ಯದ ಜನರು ಆತಂಕಗೊಂಡಿದ್ದರು. ಆದರೆ ಸೂಕ್ತ ಸಮಯದಲ್ಲೇ ಉಗ್ರರನ್ನು ಬಂಧಿಸಿ ಮುಂದಿನ ಅನಾಹುತಗಳನ್ನು ಎನ್‌ಐಎ ತಪ್ಪಿಸಿದೆ. ಇದಕ್ಕಾಗಿ ಎನ್‌ಐಎ ಅಧಿಕಾರಿಗಳಿಗೆ ಅಭಿನಂದಿಸುತ್ತೇನೆ ಎಂದರು.

ಕಾಂಗ್ರೆಸ್‌ ನಾಯಕರು ಈ ಘಟನೆಯನ್ನು ತಿರುಚುವ ಕೆಲಸ ಮಾಡಿದ್ದರು. ಅಲ್ಪಸಂಖ್ಯಾತರಿಗೆ ನೋವಾದರೆ ಮತಬ್ಯಾಂಕ್‌ ತಪ್ಪುತ್ತದೆ ಎಂಬ ಕಾರಣಕ್ಕೆ ಪೊಲೀಸರ ಮೇಲೆ ಒತ್ತಡ ಹಾಕಿದ್ದರು. ಇದು ವೈಯಕ್ತಿಕ, ವ್ಯಾಪಾರ ಸಂಬಂಧಿ ದ್ವೇಷ ಎನ್ನುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದರು.

ಅದರಂತೆ ಪೊಲೀಸರು ಕೂಡ ನಡೆದುಕೊಂಡರು. ಹಿಂದೆ ಕುಕ್ಕರ್‌ ಸ್ಪೋಟ ಆದಗಾಲೂ ಮಧ್ಯಪ್ರವೇಶ ಮಾಡಿದ ಡಿ.ಕೆ.ಶಿವಕುಮಾರ್‌, ನನ್ನ ಬ್ರದರ್‌ ಎಂದಿದ್ದರು. ರಾಜ್ಯ ಸರ್ಕಾರ ಈ ರೀತಿ ನಿರ್ದೇಶನ ನೀಡಿದ್ದರಿಂದ ಪೊಲೀಸರಿಗೆ ಯಾವುದೇ ಸುಳುಹು ಸಿಗಲಿಲ್ಲ. ಆದರೆ ಎನ್‌ಐಎ ಬಂದ ಬಳಿಕ ಭಯೋತ್ಪಾದಕ ಚಟುವಟಿಕೆ ಬಯಲಾಗಿದೆ ಎಂದರು.

ಕಾಂಗ್ರೆಸ್‌ನ ಸಹೋದರಿ ಮಮತಾ ಬ್ಯಾನರ್ಜಿಯವರ ರಾಜ್ಯದಲ್ಲೇ ಭಯೋತ್ಪಾದಕರು ಸಿಕ್ಕಿದ್ದಾರೆ. ಇಲ್ಲಿ ಬ್ರದರ್‌ಗಳಿದ್ದರೆ, ಅಲ್ಲಿ ಸಿಸ್ಟರ್‌ ಬಳಿಯೇ ಉಗ್ರರು ಸಿಕ್ಕಿದ್ದಾರೆ.

ಭಯೋತ್ಪಾದಕರಿಗೆ ಪಶ್ಚಿಮ ಬಂಗಾಳ ಸುರಕ್ಷಿತ ಸ್ಥಳವಾಗಿದೆ. ಎನ್‌ಐಎ ತಂಡ ಸಾಯಿ ಪ್ರಸಾದ್‌ ಎಂಬುವರನ್ನು ತನಿಖೆಗೆ ಕರೆದರೆ ಸಚಿವ ದಿನೇಶ್‌ ಗುಂಡೂರಾವ್‌ ಅದನ್ನೇ ಹಿಡಿದುಕೊಂಡು ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದರು.

ಸಾಯಿ ಪ್ರಸಾದ್‌ ಸಾಕ್ಷಿಯಾಗಿ ಹೋಗಿದ್ದು, ಅವರ ವಿವರವನ್ನು ಎಲ್ಲರ ಮುಂದೆ ಕಾಂಗ್ರೆಸ್‌ನವರು ಬಹಿರಂಗ ಮಾಡಿದ್ದಾರೆ. ದೇಶದ ಬಗ್ಗೆ ಇವರಿಗೆ ಯಾವುದೇ ಕಾಳಜಿ ಇಲ್ಲ.

ಲೂಟಿ ಹೊಡೆಯಲು ಇನ್ನೊಂದು ದೇಶ ಕಟ್ಟಬೇಕು ಎಂಬ ಆಶಯ ಇವರದ್ದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ಪಾಕ್‌ ಜಿಂದಾಬಾದ್‌ ಕೂಗಿದ ದೇಶದ್ರೋಹಿ ಘಟನೆಯನ್ನು ಸಚಿವ ಪ್ರಿಯಾಂಕ್‌ ಖರ್ಗೆ ತಿರುಚಲು ಯತ್ನಿಸಿದ್ದರು.

ಕೆಜಿ ಹಳ್ಳಿ, ಡಿಜೆ ಹಳ್ಳಿ ಘಟನೆ ಕೂಡ ಭಯೋತ್ಪಾದಕ ಘಟನೆಯಂತೆಯೇ ಇತ್ತು. ಸಂಪತ್‌ ರಾಜ್‌ ಜೈಲಿಗೆ ಹೋಗಿ ಬಂದರೂ ಮಂಡಳಿಯ ಅಧ್ಯಕ್ಷನಾಗಿ ಆಯ್ಕೆ ಮಾಡಿದ್ದಾರೆ.

ಆದರೆ ದಲಿತ ಶಾಸಕನ ಮನೆಗೆ ಬೆಂಕಿ ಹಾಕಿದರೂ ಕ್ರಮ ಕೈಗೊಳ್ಳಲಿಲ್ಲ ಎಂದರು.

ಚುನಾವಣೆಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವೈಯಕ್ತಿಕವಾಗಿ ದಾಳಿ ಮಾಡಲಾಗುತ್ತಿದೆ. ಹಿಟ್ಲರ್‌, ಸರ್ವಾಧಿಕಾರಿ ಎಂದು ಟೀಕೆ ಮಾಡುವವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು.

ಈ ದೇಶದಲ್ಲಿ ರಿಯಲ್‌ ಹಿಟ್ಲರ್‌ ಎಂದರೆ ಅದು ಕಾಂಗ್ರೆಸ್‌ ಮಾತ್ರ. ತುರ್ತು ಪರಿಸ್ಥಿತಿ ಹೇರಿ ಎಲ್ಲರನ್ನೂ ಜೈಲಿಗಟ್ಟುವ ಕೆಲಸವನ್ನು ಇಂದಿರಾಗಾಂಧಿ ಮಾಡಿದ್ದರು.

ವಿಶ್ವವೇ ಒಪ್ಪಿಕೊಂಡ ನರೇಂದ್ರ ಮೋದಿಯವರನ್ನು ಹಿಟ್ಲರ್‌ಗೆ ಹೋಲಿಸುವ ಕಾಂಗ್ರೆಸ್‌ ಇನ್ನೂ ಬ್ರಿಟಿಷ್‌ ಮನಸ್ಥಿತಿಯಲ್ಲೇ ಇದೆ ಎಂದರು.

ಸಂವಿಧಾನ ಭಗವದ್ಗೀತೆ : ಬಿಜೆಪಿಯ ಪಾಲಿಗೆ ಸಂವಿಧಾನವು ಭಗವದ್ಗೀತೆಯಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸುತ್ತಾರೆ ಎಂದು ಕಾಂಗ್ರೆಸ್‌ನವರು ಅಪಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷ ದುರ್ಬಲವಾಗಿರುವುದರಿಂದ ಅವರಿಗೆ ದುರ್ಬಲ ದೇಶವೇ ಬೇಕಿದೆ. ಭಾರತ ಬಲಿಷ್ಠವಾಗುವುದು ಕಾಂಗ್ರೆಸ್‌ಗೆ ಬೇಕಿಲ್ಲ ಎಂದು ಆರ್‌.ಅಶೋಕ ಹೇಳಿದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

5 mins ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

27 mins ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

2 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

2 hours ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

2 hours ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

3 hours ago