ಬೆಂಗಳೂರು : ಸರ್ಕಾರದ ಸಾಧನೆಯನ್ನು ಜನತೆಯ ಮುಂದಿಟ್ಟು ಮತಯಾಚನೆ ಮಾಡಿ. ಇದರಿಂದ ಗೌರವದ ಸೋಲನ್ನಾದರೂ ಪಡೆಯಬಹುದು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಅಮಿತ್ ಶಾ ಅವರನ್ನು ಟ್ಯಾಗ್ ಮಾಡಿ ಬರೆದಿರುವ ಅವರು, ಅಮಿತ್ ಶಾ ಅವರೇ, ಕರ್ನಾಟಕಕ್ಕೆ ಅನ್ಯಾಯ ಮಾಡಬೇಡಿ, ಕನ್ನಡಿಗರಿಗೆ ದ್ರೋಹ ಎಸಗಬೇಡಿ, ಕನ್ನಡ ಭಾಷೆಯನ್ನು ತುಳಿಯಲು ಹೋಗಬೇಡಿ, ರಾಜ್ಯದ ಶಾಂತಿ ಮತ್ತು ನೆಮ್ಮದಿಯನ್ನು ಕೆಡಿಸಲು ಹೋಗಬೇಡಿ ಎಂದಿದ್ದಾರೆ.
ಸರ್ಕಾರದ ಸಾಧನೆಯನ್ನು ಜನತೆಯ ಮುಂದಿಟ್ಟು ಮತಯಾಚನೆ ಮಾಡಿ. ಇದರಿಂದ ಗೌರವದ ಸೋಲನ್ನಾದರೂ ಪಡೆಯಬಹುದು.
ಇದರ ಹೊರತಾಗಿ ಅಡ್ಡಮಾರ್ಗದ ಮೂಲಕ ಚುನಾವಣೆಯನ್ನು ಎದುರಿಸಲು ಹೊರಟರೆ ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶವೇ ಲೋಕಸಭಾ ಚುನಾವಣೆಯಲ್ಲಿ ಪುನರಾವರ್ತನೆಯಾಗುವುದು ಖಂಡಿತ ಎಂದು ಹೇಳಿದ್ದಾರೆ.