ಕಲಬುರ್ಗಿ: ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಾವು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಶನಿವಾರ ವಿಜಯಪುರದಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು, ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಾದ್ಯಂತ ಬಿಜೆಪಿ ಪರವಾದ ವಾತಾರಣ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ಬಾರಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದರು.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ಯಾವುದೇ ಶಕ್ತಿಯಿಂದ ತಡೆಯಲು ಸಾಧ್ಯವಿಲ್ಲ. ಹಲವರು ತಾವೇ ಮುಖ್ಯಮಂತ್ರಿ ಅಭ್ಯರ್ಥಿಗಳು ಎಂದು ಹೇಳಿಕೊಂಡು ತಿರುಕನ ಕನಸು ಕಾಣುತ್ತಾ ಓಡಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ನಾಯಕರನ್ನು ಟೀಕಿಸಿದರು.
ಬಿಜೆಪಿಯಲ್ಲಿ ನಾಯಕತ್ವ ಕೊರತೆ ಇದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿಕೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಅವರು, ‘ಕಾಂಗ್ರೆಸ್ ನಾಯಕರು ಏನು ಮಾಡಿದ್ದಾರೆ ಎಂಬುದನ್ನು ಒಂದೆರಡು ಮಾತುಗಳಲ್ಲಿ ಹೇಳಲಿ ನೋಡೋಣ. ನಾವು ಮಾಡಿರುವ ಕೆಲಸವನ್ನು ನರು ಹಾಡಿ ಹೋಗಳುತ್ತಿದ್ದಾರೆ. ಒಂದು ವೇಳೆ ಕಾಂಗ್ರೆಸ್ ನಾಯಕರು ಒಳ್ಳೆಯ ಕೆಲಸ ಮಾಡಿದ್ದರೆ ಅಧಿಕಾರವನ್ನು ಏಕೆ ಕಳೆದುಕೊಂಡರು? ಡಿ.ಕೆ.ಶಿವಕುಮಾರ ಮತ್ತು ಸಿದ್ದರಾಮಯ್ಯ ಅವರು ಈ ರೀತಿ ಮಾತನಾಡುವುದು ಸರಿಯಲ್ಲ. ವಿರೋಧ ಪಕ್ಷದ ಮುಖಂಡರಾಗಿ ಜವಾಬ್ದಾರಿಯುತವಾಗಿ ಮಾತನಾಡಲಿ ಎಂದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಫೆ.6 ರಂದು ರಾಜ್ಯಕ್ಕೆ ಮತ್ತೆ ಪ್ರಧಾನಿ ಭೇಟಿ
Next Article ಜಮ್ಮುವಿನಲ್ಲಿ ಅವಳಿ ಸ್ಛೋಟ;7 ಮಂದಿಗೆ ಗಾಯ