ಬೆಂಗಳೂರು– ವಿಧಾನಸಭೆ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸಿ ಸ್ವತಃ ಬಲದ ಮೇಲೆ ಅಧಿಕಾರ ಹಿಡಿಯಲು ಮುಂದಾಗಿರುವ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಬುಗಿಲೆದ್ದಿದ್ದು, ಪ್ರಣಾಳಿಕೆ ಸಮಿತಿಗೆ ಡಾ.ಜಿ.ಪರಮೇಶ್ವರ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಡೆಗೆ ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ಅಸಮಾಧಾನಗೊಂಡಿದ್ದಾರೆ ಎಂದು ತಿಳಿದು ಬಂದಿದೆ ಕಾಂಗ್ರೆಸ್ ಪಕ್ಷಕ್ಜೆ ಈ ದಿಢೀರ್ ಬೆಳವಣಿಗೆ ಭಾರೀ ಹಿನ್ನಡೆ ಉಂಟುಮಾಡಿದ್ದು, ಪರಮೇಶ್ವರ್ ಅವರ ರಾಜೀನಾಮೆಯನ್ನು ಹಿಂಪಡೆಯಲು ಪಕ್ಷದ ನಾಯಕರು
ನಡೆಸಿದ ಸಂಧಾನ ಫಲ ಕೊಟ್ಡಿಲ್ಲ.
ಇದರ ಜೊತೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ .ಎಂ.ಬಿ.ಪಾಟೀಲ್ ಕೂಡ ಪಕ್ಷದಲ್ಲಿ ನಡೆಯುತ್ತಿರುವ ಏಕಪಕ್ಷೀಯ ತೀರ್ಮಾನಗಳಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನಸಭಾ ಚುನಾವಣೆಯ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದ ಪರಮೇಶ್ವರ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದ್ದು, ತಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪಟ್ಡು ಹಿಡಿದಿದ್ದಾರೆ.
ರಾಜೀನಾಮೆ ಪತ್ರ ಖರ್ಗೆ ಅವರ ಕೈಗೆ ಸೇರುತ್ತಿದ್ದಂತೆ ಪರಮೇಶ್ವರ್ ಅವರನ್ನು ಮನವೊಲಿಸಲು ಖುದ್ದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣಜಿತ್ ಸಿಂಗ್ ಸುರ್ಜೇವಾಲ ಅವರು ದೌಡಾಯಿಸಿ , ರಾಜೀನಾಮೆ ಹಿಂಪಡೆಯುವಂತೆ ಮನವಿ ಮಾಡಿದರು.
ಇದರ ಜೊತೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಕೂಡ ಪರಮೇಶ್ವರ್ ಅವರ ಜೊತೆ ದೂರವಾಣಿ ಮೂಲಕ ಮಾತನಾಡಿ,
ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಸೂಚಿಸಿದರು.
ಆದರೆ, ಪಕ್ಷದ ಯಾವುದೇ ನಾಯಕರ ಮಾತಿಗೆ ಜಗ್ಗದ ಮೃದು ಸ್ವಾಭಾವದ ಪರಮೇಶ್ವರ್ ತಮ್ಮನ್ನು ಪಕ್ಷದೊಳಗೆ ನಡೆಸಿಕೊಳ್ಳುತ್ತಿರುವ ಒಂದು ಬಣದ ಬಗ್ಗೆ ತೀವ್ರ ಬೇಸರ ಹೊರಹಾಕಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಪಕ್ಷದ ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಂದರ್ಭದಲ್ಲಿ ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂಬುದು ಪರಮೇಶ್ವರ್ ಅಸಮಾಧಾನಕ್ಕೆ ಕಾರಣವಾಗಿದೆ. ಈ ನಡುವೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಅಷ್ಟೇ ಏಕೆ, ಡಿಸಿಎಂ, ಪ್ರಬಲ ಖಾತೆಗಳನ್ನೂ ನಿಭಾಯಿಸಿದ್ದೇನೆ. ಪಕ್ಷ ಸಂಘಟನೆಯಲ್ಲಿ ನನ್ನದೆ ಆದ ಕೊಡುಗೆ ಇದೆ. ಪ್ರಸ್ತುತ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸಹ ಆಗಿದ್ದೇನೆ. ಆದರೂ ತನ್ನನ್ನ ಕಡೆಗಣಿಸಿ ಉಚಿತ ಯೋಜನೆಗಳ ಘೋಷಣೆ ಮಾಡುತ್ತಿದ್ದಾರೆಂದು ಬೇಸರ ತೋಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪರಮೇಶ್ವರ್ ಬೇಸರಗೊಂಡ ಸುದ್ದಿ ತಿಳಿಯುತ್ತಿದ್ದಂತೆ ಪರಮೇಶ್ವರ್ ನಿವಾಸಕ್ಕೆ ರಣದೀಪ್ ಸಿಂಗ್ ಸುರ್ಜೇವಾಲಾ ಭೇಟಿ ನೀಡಿ ಮಾಡಿದ್ದಾರೆ. ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಸದಾಶಿವನಗರ ದಲ್ಲಿರುವ ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿ ಸುರ್ಜೇವಾಲ ಮಾತುಕತೆ ನಡೆಸಿದ್ದಾರೆ. ಭೇಟಿ ವೇಳೆಯಲ್ಲಿ ಎಲ್ಲವೂ ಸರಿಪಡಿಸುವ ಭರವಸೆ ನೀಡಿದ್ದಾರೆಂದು ಮೂಲಗಳ ಮಾಹಿತಿ ನೀಡಿವೆ.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರಣಿ ಘೋಷಣೆಗಳನ್ನು ಮಾಡುತ್ತಿದೆ. ಜಿಲ್ಲಾ ಪ್ರವಾಸದ ವೇಳೆಯಲ್ಲಿ ಘೋಷಣೆಗಳನ್ನು ಡಿಕೆಶಿ ಹಾಗೂ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಗೃಹಲಕ್ಷಿ, ಗೃಹ ಜ್ಯೋತಿ ಯೋಜನೆಗಳು, ಜೊತೆಗೆ ಜಮೀನು ಇಲ್ಲದವರಿಗೆ ಸರ್ಕಾರದಿಂದ ಭೂಮಿ ನೀಡುವ ಘೋಷಣೆ ಗಮನ ಸೆಳೆಯುತ್ತಿವೆ.
ಆದರೆ ಪ್ರಣಾಳಿಕೆ ಘೋಷಣೆ ಸಂದರ್ಭದಲ್ಲಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬುದು ಪರಮೇಶ್ವರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ತಮ್ಮ ಆಪ್ತರ ಬಳಿಯೂ ಬೇಸರ ಹೊರ ಹಾಕಿದ್ದಾರೆ .
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.