ಬೆಂಗಳೂರು : ಚಿಕ್ಕಮಗಳೂರಿನ ಬಿಜೆಪಿ ಮುಖಂಡ ಎಚ್.ಡಿ.ತಮ್ಮಯ್ಯ ಹಾಗೂ ಇತರರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆಪ್ತರಾಗಿದ್ದ ತಮ್ಮಯ್ಯ ಭಾನುವಾರ ಅಪಾರ ಅವರ ಸಂಖ್ಯೆಯ ಬೆಂಬಲಿಗರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಉಪಾಧ್ಯಕ್ಷ ಡಾ. ಬಿ.ಎಲ್. ಶಂಕರ್, ಪ್ರಧಾನ ಕಾರ್ಯದರ್ಶಿಗಳಾದ ರಾಮಚಂದ್ರಪ್ಪ, ಜೆ. ಹುಚ್ಚಯ್ಯ, ಚಿಕ್ಕಮಗಳೂರು ಮುಖಂಡರಾದ ಮಂಜೇಗೌಡ, ಹನೀಫ್, ನಯಾಜ್ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಚಿಕ್ಕಮಗಳೂರಿನಲ್ಲಿ ಇನ್ನೂ ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ತಮ್ಮಯ್ಯ ಹಾಗೂ ಬೆಂಬಲಿಗರು ಕಾಂಗ್ರೆಸ್ ಪರವಾಗಿ ಬೂತ್ ಮಟ್ಟದಲ್ಲಿ ಕೆಲಸ ಮಾಡುತ್ತಾರೆ. ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಬಲ ಹೆಚ್ಚಲಾಗಿದೆ. ಇಷ್ಟು ದಿನ ಬಿಜೆಪಿಯಲ್ಲಿದ್ದ ತಮ್ಮಯ್ಯ ಭಾವನಾತ್ಮಕವಾಗಿ ರಾಜಕಾರಣ ನಡೆಯುತ್ತಿದೆ. ಹೊಟ್ಟೆ ಪಾಡು ಏನು ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಯ ನಾಯಕ ಆಯನೂರು ಮಂಜುನಾಥ್ ಕೂಡ ಚುನಾವಣೆ ಕಾಲದಲ್ಲಿ ಕೋಮು ಸೌಹಾರ್ದತೆಯ ಸಂದೇಶ ಸಾರುವ ಪೋಸ್ಟರ್ಗಳನ್ನು ಅಂಟಿಸುತ್ತಿದ್ದಾರೆ. ಈ ಮೊದಲು ಬಿಜೆಪಿಯ ನಾಯಕರು ಕೋಮುವಾದ ಸೃಷ್ಟಿಸಿ ನಷ್ಟ ಮಾಡಿದ್ದಾರೆ. ಬಂಡವಾಳ ಹೂಡಿಕೆಗೆ ಧಕ್ಕೆಯಾಗಿದೆ. ಕೈಗಾರಿಕೆಗಳು ಸೊರಗುತ್ತಿವೆ, ಉದ್ಯೋಗ ನಷ್ಟವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಎಚ್.ಡಿ.ತಮ್ಮಯ್ಯ ಮಾತನಾಡಿ, ನಾವು ಬಿಜೆಪಿಯಲ್ಲಿ 14 ವರ್ಷ ಕೆಲಸ ಮಾಡಿದ್ದೇವು. ಶಿವರಾತ್ರಿ ಜಾಗರಣೆ ಮಾಡಿ, ಪೂಜೆ ಮುಗಿಸಿ ಬಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದೇವೆ. ಜಾಗರಣೆಯ ಕಾರಣಕ್ಕೆ 250 ಕಿಲೋ ಮೀಟರ್ ದೂರದ ಪ್ರಯಾಣ ಸುರಕ್ಷಿತ ಅಲ್ಲ ಎಂದು ಬಹಳಷ್ಟು ಮಂದಿ ಚಿಕ್ಕಮಗಳೂರಿನಲ್ಲೇ ಉಳಿದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಜನ ಪಕ್ಷ ಸೇರ್ಪಡೆಯಾಗುತ್ತಾರೆ ಎಂದರು.
ಡಿ.ಕೆ.ಶಿವಕುಮಾರ್ ಅಧ್ಯಕ್ಷರಾದ ಮೇಲೆ ಪಕ್ಷದಲ್ಲಿ ಸಂಚಲನ ಸೃಷ್ಟಿಯಾಗಿದೆ. ಬಿಜೆಪಿ, ಜೆಡಿಎಸ್ನಿಂದ ಹಲವಾರು ಮಂದಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೂ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.
ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಬಲವಾದ ತಳಹದಿ ಹೊಂದಿತ್ತು. ಬೇರೆ ಬೇರೆ ಕಾರಣಕ್ಕೆ ದುರ್ಬಲವಾಗಿತ್ತು. ಈಗ ಚಿಕ್ಕಮಗಳೂರಿನಿಂದಲೇ ಬಿಜೆಪಿ ಕುದುರೆ ಕಟ್ಟಿ ಹಾಕುವ ಯಾಗಕ್ಕೆ ಚಾಲನೆ ನೀಡಿದ್ದೇವೆ. ಮತ್ತೆ ಕಾಂಗ್ರೆಸ್ನ ಗತವೈಭವ ಮರಳಲಿದೆ. ಮುಂದಿನ ಚುನಾವಣೆಯಲ್ಲಿ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ನಲ್ಲಿ ಗೆಲ್ಲಲಿದೆ ಎಂದರು.