ಬೆಂಗಳೂರು– : ಬಿಜೆಪಿಯವರಿಗೆ ಕುಸ್ತಿ ಮಾಡಲು ಜನ ಬೇಕಾಗಿದೆ. ಹೀಗಾಗಿ ಸೇರಿಸಿಕೊಳ್ಳುತ್ತಿದ್ದಾರೆ, ಸೇರಿಸಿಕೊಳ್ಳಲಿ ಬಿಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಛೇಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಸಾಲು ರೌಡಿ ಶೀಟರ್ ಗಳ ಸೇರ್ಪಡೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಚುನಾವಣೆಗಾಗಿ ಬಿಜೆಪಿ ಸಿದ್ಧಾಂತ ಮರೆಯುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಗೆ ಯಾವಾಗ ಯಾವ ಸಿದ್ಧಾಂತ ಇತ್ತು? ಅವರು ಸಿದ್ಧಾಂತದ ಬಗ್ಗೆ ಮಾತನಾಡಿಲ್ಲ, ಮಾತನಾಡುವುದೂ ಇಲ್ಲ. ಅವರು ಭಾವನಾತ್ಮಕ ರಾಜಕಾರಣ ಮಾಡುತ್ತಾರೆ. ಭಾವನೆಗೂ, ಬದುಕಿಗೂ ವ್ಯತ್ಯಾಸವಿದೆ. ಬದುಕಿನ ಮೇಲೆ ರಾಜಕಾರಣ ಮಾಡಿಲ್ಲ. ಜನರ ಹೊಟ್ಟೆ ತುಂಬಿಸಿ, ಅವರಿಗೆ ಉದ್ಯೋಗ ಕೊಟ್ಟು, ಬದುಕು ಕಟ್ಟಿಕೊಳ್ಳುವ ಅವಕಾಶ ನೀಡಬೇಕು ಎಂಬುದು ಅವರಲ್ಲಿ ಇಲ್ಲ. ಅವರಿಗೇನಿದ್ದರೂ ಭಾವನೆಗಳ ವಿಚಾರದ ಮೇಲಷ್ಟೇ ಆಸಕ್ತಿ ಎಂದರು.
ಚುನಾವಣೆ ಸಮಯದಲ್ಲಿ ರಾಜ್ಯದ ಶಾಂತಿ ಕದಡುವ ಪ್ರಯತ್ನ ನಡೆಯುತ್ತಿದೆ. ಮಹಾರಾಷ್ಟ್ರದ ಯಾವುದೇ ಪಕ್ಷದವರಾಗಿರಲಿ ಗಡಿ ವಿವಾದದ ಹೆಸರಲ್ಲಿ ಶಾಂತಿ ಕದಡುವುದು ಮತ್ತು ಇದರಲ್ಲಿ ಭಾಗಿಯಾಗುವುದು ಸರಿಯಲ್ಲ. ನಮ್ಮ ಮುಖ್ಯಮಂತ್ರಿಗಳು ತಮ್ಮ ಸರ್ಕಾರದ ಮೇಲಿರುವ ಕಳಂಕ ಮರೆಮಾಚಿಕೊಳ್ಳಲು ಇದನ್ನು ದೊಡ್ಡದಾಗಿ ಮಾಡುತ್ತಿದ್ದಾರೆ. ಇದರ ಹಿಂದೆ ಸಂಚೊಂದು ಅಡಗಿದೆ ಎಂದು ಆರೋಪಿಸಿದರು.
ಗಡಿ ವಿವಾದ ಈಗಾಗಲೇ ಇತ್ಯರ್ಥ ಆಗಿರುವ ವಿಚಾರ. ನಮ್ಮ ಗಡಿಯೊಳಗಿನ ಪ್ರದೇಶ ನಮ್ಮದು, ಅವರ ಗಡಿಯೊಳಗಿನ ಪ್ರದೇಶ ಅವರದ್ದು. ಇಲ್ಲಿರುವವರೆಲ್ಲ ನಮ್ಮವರೇ. ಬೆಳಗಾವಿಯಲ್ಲಿ ನಾವು ಸುವರ್ಣಸೌಧ ಕಟ್ಟಿದ್ದು, ಯಾರೂ ಶಾಂತಿ ಭಂಗ ಕೆಲಸ ಮಾಡಬಾರದು ಎಂದು ಸಲಹೆ ನೀಡಿದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
ಬಿಜೆಪಿಯವರು ಭಾವನಾತ್ಮಕ ರಾಜಕಾರಣ ಮಾಡುತ್ತಾರೆ. ಭಾವನೆಗೂ, ಬದುಕಿಗೂ ವ್ಯತ್ಯಾಸವಿದೆ : ಡಿಕೆಶಿ
Previous Articleರಾಜ್ಯದ ನಿಲುವು ಕಾನೂನು ಬದ್ಧ; ಸಿಎಂ
Next Article ಸಿಂಗಾಪುರ ವಿಶ್ವದ ಅತ್ಯಂತ ದುಬಾರಿ ನಗರ