ಬೆಳಗಾವಿ : ಲೋಕಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕರ ಬದಲಾವಣೆಯಾಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಮತ್ತೆ ಬಾಂಬ್ ಸಿಡಿಸಿದ್ದಾರೆ.
ಸುವರ್ಣಸೌಧದ ಬಳಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಉತ್ತರ ಕರ್ನಾಟಕ ಭಾಗದವರಿಗೆ ನಾಯಕತ್ವ ನೀಡಿ ನ್ಯಾಯ ಒದಗಿಸುವವರೆಗೂ ನಾನು ಪಕ್ಷದ ಶಾಸಕಾಂಗ ಸಭೆಗೆ ಹೋಗುವುದಿಲ್ಲ. ಉತ್ತರ ಕರ್ನಾಟಕದವರು ದಕ್ಷಿಣ ಕರ್ನಾಟಕದವರ ಗುಲಾಮರಲ್ಲ ಎಂದು ಗರಂ ಆಗಿದ್ದಾರೆ.
ಮುಂದುವರೆದು ಮಾತನಾಡಿದ ಅವರು, ತೆಲಂಗಾಣದಲ್ಲಿ ಕುಟುಂಬ ರಾಜಕಾರಣವನ್ನು ಕಿತ್ತೊಗೆದಿದ್ದಾರೆ. ಲೋಕಸಭಾ ಚುನಾವಣೆಯ ಬಳಿಕ ಇಡೀ ದೇಶದಲ್ಲಿ ಕುಟುಂಬ ರಾಜಕಾರಣ ಕೊನೆಗಾಣಲಿದೆ. ವಂಶ ರಾಜಕಾರಣವನ್ನು ಕೊನೆಗಾಣಿಸುವುದೇ ನಮ್ಮ ಗುರಿ ಲೊಕಸಭಾ ಚುನವಾಣೆ ಮುಗಿದ ನಂತರ ರಾಜ್ಯದಲ್ಲಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಇಬ್ಬರೂ ಕೂಡ ಬದಲಾಗಲಿದ್ದಾರೆ ಎಂದಿದ್ದಾರೆ.
ಇತ್ತೀಚೆಗಷ್ಟೇ ವಿಜಯಪುರದಲ್ಲಿ ನಡೆದ ದಾನಮ್ಮ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಷಣ ಮಾಡುವ ವೇಳೆ ಯತ್ನಾಳ್ ಅವರು ಈಗ ನಾನೆ ವಿಪಕ್ಷ ನಾಯಕ. ಹೈಕಮಾಂಡ್ ನಿಂದ ವಿಪಕ್ಷ ನಾಯಕನ ನೇಮಕವಾಗಿದ್ದರೂ ನಾನೇ ವಿಪಕ್ಷ ನಾಯಕ ಎಂದು ಬಾಂಬ್ ಒಂದನ್ನು ಸಿಡಿಸಿದ್ದರು.
ಇನ್ನು ಮುಂದೆ ನಮ್ಮ ದಂಗಲ್ ಶುರುವಾಗುತ್ತೆ. ಆಗ ಯಾರು ನಿಜವಾದ ವಿಪಕ್ಷ ನಾಯಕ ಅಂತ ಫಿಕ್ಸ್ ಮಾಡ್ತೀವಿ. ಈಗ ನಾನೇ ವಿಪಕ್ಷ ನಾಯಕ. ಬಿಜೆಪಿಯಲ್ಲಿ ವಿಪಕ್ಷ ನಾಯಕನ ಸ್ಥಾನ ಸೇಲ್ ಆಗಿದೆಯಾ ? ಯಾರಾದರೂ ಏನಾದರೂ ಕೊಟ್ಟು ತಗೊಂಡು ಮಾಡಿದ್ರೆ ನಾವು ಒಪ್ಪುತ್ತೇವೆ ಎಂದು ಹೇಳಿದ್ದರು.
ಇದೀಗ ಮತ್ತೆ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಬದಲಾವಣೆಯ ಬಗ್ಗೆ ಮಾತನಾಡುವ ಮೂಲಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜಕೀಯ ವಲಯದಲ್ಲಿ ಗೊಂದಲ ಸೃಷ್ಟಿ ಮಾಡಿದ್ದಾರೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…