ರಾಜಕೀಯ

ಬಿಜೆಪಿಯ ಆಂತರಿಕ ಕಲಹ ಈಗ ಬೀದಿ ಜಗಳವಾಗಿದೆ : ಕಾಂಗ್ರೆಸ್‌

ಬೆಂಗಳೂರು : ಬಿಜೆಪಿಯ ಆಂತರಿಕ ಕಲಹ ಈಗ ಆಂತರಿಕವಾಗಿಲ್ಲ, ಬೀದಿ ಜಗಳವಾಗಿ ಪರಿಣಮಿಸಿದೆʼ ಎಂದು ರಾಜ್ಯ ಕಾಂಗ್ರೆಸ್‌ ಟೀಕಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಬಿಜೆಪಿ ಶಾಸಕ ಪ್ರಭು ಚೌಹಾಣ್ ಅವರು ಬಿಜೆಪಿ ಸಂಸದರ ಮೇಲೆ ಕೊಲೆ ಷಡ್ಯಂತ್ರದ ಆರೋಪ ಹೋರಿಸಿದ ನಂತರ ಭಗವಂತ ಖೂಬಾ ಅವರು ಅಹಿತಕರ ಘಟನೆ ನಡೆದರೆ ನಾನು ಹೊಣೆಯಲ್ಲ ಎಂದು ಅಂಟಿಸಿಪೇಟರಿ ಬೇಲ್ ಪಡೆಯುತ್ತಿದ್ದಾರೆ. ಇದರ ಅರ್ಥ ಚೌಹಾಣ್ ಅವರು ಮುಂದೆ ಅಹಿತಕರ ಘಟನೆಯನ್ನು ಎದುರಿಸಬೇಕಾಗುತ್ತದೆ ಎಂಬ ಸುಳಿವು ನೀಡಿದ್ದೇ ಎಂದು ಸಂಶಯ ವ್ಯಕ್ತಪಡಿಸಿದೆ.

ಬಿಜೆಪಿ ಶಾಸಕರ ಆರೋಪದ ಬಗೆಗಿನ ತನಿಖೆಗೆ ರಾಜ್ಯದ ಪೋಲೀಸರ ಬದಲು ಸಿಬಿಐ ತನಿಖೆಗೆ ಆಗ್ರಹಿಸಿಲ್ಲವೇಕೆ? ಸಂಸದರ ಷಡ್ಯಂತ್ರದ ಬಗ್ಗೆ ಮೋದಿಗೆ ದೂರು ಕೊಡಲಿಲ್ಲವೇಕೆ? ತಮ್ಮ ಶಾಸಕರಿಗೆ ಜೀವ ಬೆದರಿಕೆ ಇದ್ದರೂ ಬಿಜೆಪಿ ಮೌನ ವಹಿಸಿರುವುದೇಕೆ? ಎಂದು ಕಾಂಗ್ರೆಸ್‌ ರಾಜ್ಯ ಬಿಜೆಪಿಯನ್ನು ಪ್ರಶ್ನೆ ಮಾಡಿದೆ.

ಕೇಂದ್ರ ಸಚಿವ ಭಗವಂತ ಖೂಬಾ ನನ್ನನ್ನು ಸೋಲಿಸಲು ಸಾಕಷ್ಟು ಪ್ರಯತ್ನ ಮಾಡಿದರು. ಆದರೆ ಅವರ ಪ್ರಯತ್ನ ವಿಫಲವಾಗಿದ್ದರಿಂದ ಈಗ ತಾನು ಸಾಕಿದ ಗೂಂಡಾಗಳಿಂದ ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಪ್ರಭು ಚವ್ಹಾಣ್ ಗಂಭೀರ ಆರೋಪ ಮಾಡಿದ್ದರು.

ಈ ವಿಚಾರವಾಗಿ ಬೀದರ್ ಎಸ್ ಪಿ ಗೆ ಪತ್ರ ಬರೆದಿರುವ‌ ಕೇಂದ್ರ ಸಚಿವ ಭಗವಂತ ಖೂಬಾ ಅಹಿತಕರ ಘಟನೆ ನಡೆದರೆ ನಾನು ಹೊಣೆಯಲ್ಲ ಎಂದು ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.

lokesh

Recent Posts

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

5 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

6 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

6 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

7 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

13 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

13 hours ago