ಬೆಂಗಳೂರು : ಕೇಂದ್ರ ಸರ್ಕಾರದ ವಿರುದ್ದ ಬೆಂಗಳೂರಿನ ರಾಜಭವನ್ನು ಮುತ್ತಿಗೆ ವೇಳೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಫೋರ್ಟೀಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ತಿಳಿದುಬಂದಿದೆ.
ಕೇಂದ್ರ ಸರ್ಕಾರದ ವಿರುದ್ಧ ಈ ಪ್ರತಿಭಟನೆಯು ನಡೆಯುತ್ತಿದ್ದ ಸಂದರ್ಭದಲ್ಲಿ ಬಂಧನಕ್ಕೆ ಒಳಗಾಗಿ ಬಸ್ಸಿನಲ್ಲಿರುವಾಗ ನಂದಿನಿ ಲೇಔಟ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ. ರಾಮಕೃಷ್ಣ ಅವರಿಗೆ ಹೃದಯಾಘಾತವಾಗಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.