ಕಾಂಗ್ರೆಸ್ ನಿಗಮ ಮಂಡಳಿ ನೇಮಕಾತಿ ಪಟ್ಟಿ ಸಿದ್ಧವಾಗಿದ್ದು ಯಾವುದೇ ಕ್ಷಣದಲ್ಲಿ ಬೇಕಾದರೂ ಪ್ರಕಟವಾಗಬಹುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದವರ ಜತೆ ಮಾತನಾಡಿ ಮಾಹಿತಿ ಹಂಚಿಕೊಂಡ ಡಿಕೆ ಶಿವಕುಮಾರ್ ಎಲ್ಲವೂ ಅಂತಿಮವಾಗಿದೆ, ಈ ಸೆಕೆಂಡ್‌ನಲ್ಲೇ ನಿಗಮ ಮಂಡಳಿ ನೇಮಕಾತಿ ಪಟ್ಟಿ ಬಿಡುಗಡೆಯಾಗಬಹುದು. ನಿನ್ನೆಯೂ ಹೇಳಿದ್ದೆ, ಈಗಲೂ ಅದನ್ನೇ ಹೇಳುತ್ತೇನೆ. ಯಾವ ಕ್ಷಣದಲ್ಲಿ ಬೇಕಾದರೂ ನಿಗಮ ಮಂಡಳಿ ನೇಮಕಾತಿ ಪಟ್ಟಿ ಬಿಡುಗಡೆಯಾಗಬಹುದು. 36 ಶಾಸಕರು ಹಾಗೂ 39 ಕಾರ್ಯಕರ್ತರ ಹೆಸರನ್ನು ಪ್ರಕಟಿಸಲಾಗುವುದು ಎಂದು ಡಿಕೆಶಿ ತಿಳಿಸಿದ್ದಾರೆ.





