ಚಾಮರಾಜನಗರ : ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯನವರು ನಾಪತ್ತೆಯಾಗಿ ಎರಡ್ಮೂರು ದಿನಗಳೇ ಕಳೆದರೂ ಕೂಡ ಪತ್ತೆಯಾಗಿಲ್ಲ. ಇದೀಗ ಅವರ ಕಾರು ಚಾಮರಾಜನಗರದ ಬಳಿ ಪತ್ತೆಯಾಗಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರದ ಬಳಿ ಮಹದೇವಯ್ಯನವರ ಕಾರು ಪತ್ತೆಯಾಗಿದೆ. ಈ ಕಾರಿನ ಟೈ ಲ್ಯಾಂಪ್ ಮೇಲೆ ರಕ್ತದ ಕಲೆಗಳಿವೆ. ಸಧ್ಯ ಕಾರು ಪತ್ತೆಯಾಗಿರುವ ಸ್ಥಳಕ್ಕೆ ಫಾರೆನ್ಸಿಕ್ ತಂಡ ಹಾಗೂ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಹದೇವಯ್ಯನವರು ರಾಮಾಪುರಕ್ಕೆ ಏಕೆ ಬಂದಿದ್ದರು ? ಕಾರನ್ನು ಯಾರು ಚಲಾಯಿಸಿಕೊಂಡು ಬಂದಿದ್ದರು ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.
ಮಹದೇವಯ್ಯನವರನ್ನು ಪತ್ತೆ ಹಚ್ಚಲು ಈಗಾಗಲೇ ಚನ್ನಪಟ್ಟಣ ಡಿವೈಎಸ್ಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಇನ್ನು ಮಹದೇವಯ್ಯ ಅವರ ಮೊಬೈಲ್ ಲೊಕೇಶನ್ ಅನ್ನೂ ಕೂಡ ಪರಿಶೀಲನೆ ಮಾಡಲಾಗುತ್ತಿದೆ. ಆದರೆ ಒಂದು ಬಾರಿ ಮಾತ್ರ ಯಾರೋ ಅಪರಿಚಿತರು ಫೋನ್ ರಿಸೀವ್ ಮಾಡಿದ್ದಾರೆ. ನಂತರ ಮೊಬೈಲ್ ಸ್ವಿಚ್ ಆಫ್ ಆಗಿದೆ.
ಕಳೆದ ಶನಿವಾರ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ರಾಮನಗರದ ಚಳ್ಳಕೆರೆಯಲ್ಲಿರುವ ತಮ್ಮ ತೋಟದ ಮನೆಯಿಂದ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿತ್ತು. ತೋಟದ ಮನೆಯಲ್ಲಿ ವಾಸವಿದ್ದ ಮಹದೇವಯ್ಯ ಶನಿವಾರ ಬೆಳಗ್ಗೆಯಿಂದಲೂ ನಾಪತ್ತೆಯಾಗಿದ್ದರು.
ಇನ್ನು ಮಹದೇವಯ್ಯ ತಂಗಿದ್ದ ತೋಟದ ಮನೆಯೊಳಗಿರುವ ಬೀರು ಪರಿಶೀಲಿಸಿದಾಗ ಅದರಲ್ಲಿ ಇದ್ದ ಬಟ್ಟೆಗಳು ಹಾಗೂ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಅಲ್ಲದೇ ಮಹದೇವಯ್ಯ ಅವರ ಮೊಬೈಲ್ ಸಹ ಸ್ವಿಚ್ ಆಫ್ ಆಗಿತ್ತು ಇದರಿಂದ ಮಹದೇವಯ್ಯ ಅವರು ಅಪಹರಣಕ್ಕೆ ಒಳಗಾಗಿದ್ದಾರಾ ಎಂಬ ಅನುಮಾನ ಮೂಡಿತ್ತು.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…