ರಾಜಕೀಯ

ಸಿಪಿ ಯೋಗೇಶ್ವರ್‌ ಭಾವ ನಾಪತ್ತೆ ಕೇಸ್‌ : ಚಾಮರಾಜನಗರದಲ್ಲಿ ಕಾರು ಪತ್ತೆ

ಚಾಮರಾಜನಗರ : ಬಿಜೆಪಿ ನಾಯಕ ಸಿಪಿ ಯೋಗೇಶ್ವರ್‌ ಅವರ ಭಾವ ಮಹದೇವಯ್ಯನವರು ನಾಪತ್ತೆಯಾಗಿ ಎರಡ್ಮೂರು ದಿನಗಳೇ ಕಳೆದರೂ ಕೂಡ ಪತ್ತೆಯಾಗಿಲ್ಲ. ಇದೀಗ ಅವರ ಕಾರು ಚಾಮರಾಜನಗರದ ಬಳಿ ಪತ್ತೆಯಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರದ ಬಳಿ ಮಹದೇವಯ್ಯನವರ ಕಾರು ಪತ್ತೆಯಾಗಿದೆ. ಈ ಕಾರಿನ ಟೈ ಲ್ಯಾಂಪ್‌ ಮೇಲೆ ರಕ್ತದ ಕಲೆಗಳಿವೆ. ಸಧ್ಯ ಕಾರು ಪತ್ತೆಯಾಗಿರುವ ಸ್ಥಳಕ್ಕೆ ಫಾರೆನ್ಸಿಕ್‌ ತಂಡ ಹಾಗೂ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಹದೇವಯ್ಯನವರು ರಾಮಾಪುರಕ್ಕೆ ಏಕೆ ಬಂದಿದ್ದರು ? ಕಾರನ್ನು ಯಾರು ಚಲಾಯಿಸಿಕೊಂಡು ಬಂದಿದ್ದರು ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

ಮಹದೇವಯ್ಯನವರನ್ನು ಪತ್ತೆ ಹಚ್ಚಲು ಈಗಾಗಲೇ ಚನ್ನಪಟ್ಟಣ ಡಿವೈಎಸ್ಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಇನ್ನು ಮಹದೇವಯ್ಯ ಅವರ ಮೊಬೈಲ್‌ ಲೊಕೇಶನ್‌ ಅನ್ನೂ ಕೂಡ ಪರಿಶೀಲನೆ ಮಾಡಲಾಗುತ್ತಿದೆ. ಆದರೆ ಒಂದು ಬಾರಿ ಮಾತ್ರ ಯಾರೋ ಅಪರಿಚಿತರು ಫೋನ್‌ ರಿಸೀವ್‌ ಮಾಡಿದ್ದಾರೆ. ನಂತರ ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ.

ಕಳೆದ ಶನಿವಾರ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ರಾಮನಗರದ ಚಳ್ಳಕೆರೆಯಲ್ಲಿರುವ ತಮ್ಮ ತೋಟದ ಮನೆಯಿಂದ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿತ್ತು. ತೋಟದ ಮನೆಯಲ್ಲಿ ವಾಸವಿದ್ದ ಮಹದೇವಯ್ಯ ಶನಿವಾರ ಬೆಳಗ್ಗೆಯಿಂದಲೂ ನಾಪತ್ತೆಯಾಗಿದ್ದರು.

ಇನ್ನು ಮಹದೇವಯ್ಯ ತಂಗಿದ್ದ ತೋಟದ ಮನೆಯೊಳಗಿರುವ ಬೀರು ಪರಿಶೀಲಿಸಿದಾಗ ಅದರಲ್ಲಿ ಇದ್ದ ಬಟ್ಟೆಗಳು ಹಾಗೂ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಅಲ್ಲದೇ ಮಹದೇವಯ್ಯ ಅವರ ಮೊಬೈಲ್‌ ಸಹ ಸ್ವಿಚ್‌ ಆಫ್‌ ಆಗಿತ್ತು ಇದರಿಂದ ಮಹದೇವಯ್ಯ ಅವರು ಅಪಹರಣಕ್ಕೆ ಒಳಗಾಗಿದ್ದಾರಾ ಎಂಬ ಅನುಮಾನ ಮೂಡಿತ್ತು.

lokesh

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago