ಗೋಕರ್ಣ: ಬ್ರಾಹ್ಮಣ ಮಹಾಸಭಾಕ್ಕೆ ಕಚೇರಿ ನಿರ್ಮಾಣಕ್ಕೆ ಜಾಗ ಒದಗಿಸಿದ್ದೆ ನಾನು. ಬ್ರಾಹ್ಮಣ ಅಭಿವೃದ್ಧಿ ಮಂಡಳಿ ರಚಿಸಿ 5 ಕೋಟಿ ರೂ. ಅನುದಾನ ನೀಡಿದ್ದೇನೆ. ಬಿಜೆಪಿಯವರು ಎಷ್ಟು ಅನುದಾನ ನೀಡಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಾ.ದಳ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸವಾಲೆಸೆದರು.
ಕುಮಟಾ ವಿಧಾನಸಭಾ ಕ್ಷೇತ್ರದ ಗೋಕರ್ಣದಲ್ಲಿ ಬುಧವಾರ ಪಂಚರತ್ನ ಯಾತ್ರೆಗೆ ಚಾಲನೆ ನೀಡುವ ಮುನ್ನ ಮಾಧ್ಯಮದವರ ಜತೆ ಅವರು ಮಾತನಾಡಿದರು.
ಬಿಜೆಪಿ ಹಿಂದೂಗಳನ್ನು, ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಓಲೈಸುತ್ತಿವೆ. ಜಾ.ದಳ ಎಲ್ಲರನ್ನೂ ವಿಶ್ವಾಸಕ್ಕೆ ಪಡೆಯಲು ಬಯಸುತ್ತದೆ. ನಾವು ಸರ್ವೇ ಜನಾ ಸುಖಿನೋ ಭವಂತು ಘೋಷವಾಕ್ಯವನ್ನೇ ಬಳಸುತ್ತೇವೆ ಎಂದರು.
ನಮ್ಮದು ಸಾವರ್ಕರ್ ಡಿಎನ್ಎ ಅಲ್ಲ. ಸಾವರ್ಕರ್, ಟಿಪ್ಪು ವಿಚಾರ ಕಾಂಗ್ರೆಸ್ ಮತ್ತು ಬಿಜೆಪಿಗೆ ಸಂಬಂಧಿಸಿದ ಜಗಳ. ನಮಗೂ ಅದಕ್ಕೂ ಸಂಬಂಧ ಇಲ್ಲ ಎಂದರು. ರಾಮಕೃಷ್ಣ ಹೆಗಡೆ ಅವರನ್ನು ಮುಖ್ಯಮಂತ್ರಿ ಮಾಡಿದ್ದೇ ದೇವೆಗೌಡರು. ನಳಿನ್ ಕುಮಾರ್ ಕಟೀಲ್ಗೆ ರಾಜಕೀಯ ಗೊತ್ತಿಲ್ಲ. ಅವರು ತಮ್ಮ ಹೆಸರನ್ನು ಪಿಟೀಲು ಎಂದು ಬದಲಿಸಿಕೊಳ್ಳಲಿ ಎಂದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Next Article zoom ಕಂಪೆನಿಯಲ್ಲಿ 1,300 ಉದ್ಯೋಗ ಕಡಿತ