Mysore
30
broken clouds

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ಡಿಕೆಶಿ ಟೆಂಟಲ್ಲಿ ಬ್ಲೂ ಫಿಲಂ ತೋರಿಸಿ ಜೀವನ ಮಾಡುತ್ತಿದ್ದ : ಎಚ್ ಡಿ ಕುಮಾರಸ್ವಾಮಿ

ಚಿಕ್ಕಮಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೊದಲು ಟೆಂಟ್ ನಲ್ಲಿ ಬ್ಲೂ ಫಿಲಂ ತೋರಿಸಿ ಜೀವನ ಮಾಡುತ್ತಿದ್ದ ಎಂದು ಮಾಜಿ ಸಿಎಂ ಎಚ್ ಡಿಕೆ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರೆಂಟ್ ಕಳ್ಳ ಎಂದು ಕಾಂಗ್ರೆಸ್ ಪೋಸ್ಟರ್ ಬಿಡುಗಡೆ ಮಾಡಿದ್ದಕ್ಕೆ ಗರಂ ಆಗಿದ್ದು, ಡಿಕೆ ಶಿವಕುಮಾರ್ ಅವರನ್ನು ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ.

ಅವನು ಟೆಂಟಲ್ಲಿ ಬ್ಲೂ ಫಿಲಂ ತೋರಿಸಿ ಜೀವನ ಮಾಡುತ್ತಿದ್ದ. ಆ ಮನಸ್ಥಿತಿಯಲ್ಲಿರುವ ಅವನಿಗೆ ಅವನಿಗೆ ಇನ್ನೇನು ಬರುತ್ತೆ?

ಸಾತನೂರಲ್ಲಿ 2 ಟೆಂಟ್ ಇದ್ವಲ್ಲಾ ಅಲ್ಲಿ ಮಲಯಾಳಂ ಬ್ಲೂ ಸಿನಿಮಾಗಳ ರೀಲ್ ಜೋಡಿಸುತ್ತಿದ್ದ. ನಾನು ಆ ರೀತಿಯ ಜೀವನ ಮಾಡಿಕೊಂಡು ಬಂದಿಲ್ಲ, ಅವನು ಬಂದಿರುವುದೇ ಆ ಸಂಸ್ಕೃತಿಯಲ್ಲಿ ಅಂತಹವರನ್ನು ರಾಜ್ಯದ ಜನ ಆಯ್ಕೆ ಮಾಡಿದ್ದಾರೆ. ನಾಯಕರು ಅವರಿಗೆ ಅಧಿಕಾರ ಕೊಟ್ಟಿದ್ದಾರೆ.

ಆ ತರಹದ ಪೋಸ್ಟರ್ ಪ್ರಿಪೇರ್ ಮಾಡಿಸಲು ನಮಗೂ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ತಮ್ಮ ಮಾನಸಿಕ ಸ್ವಾಸ್ಥ್ಯದ ಬಗ್ಗೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ಕೂಡ ಎಚ್‌.ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದರು .

ಈ ಬಗ್ಗೆ ಸರಣಿ ಟ್ವೀಟ್ ಮಾಡಿ ತಮ್ಮ ಮಾನಸಿಕ ಸ್ವಾಸ್ಥ್ಯದ ಬಗ್ಗೆ ಮಾತನಾಡಿದ್ದ ಸಿದ್ದರಾಮಯ್ಯ ಅವರಿಗೆ ನಿಮ್ಮ ಅಧಿಕಾರದ ಅಂಟುರೋಗಕ್ಕೆ ಮದ್ದೇನು? ಎಂದು ಪ್ರಶ್ನಿಸಿದ್ದರು. ನಿಮಗಾಗಿರುವ ಧನದಾಹದ ಜಾಡ್ಯಕ್ಕೆ ಚಿಕಿತ್ಸೆ ಪಡೆಯಬಾರದೆ ? ಮಾನಸಿಕ ಸ್ವಾಸ್ತ್ಯಕಿಂತ ಇದು ಮಾರಕ ಮನೋರೋಗವಲ್ಲವೇ ? ಮುಖ್ಯಮಂತ್ರಿಯೇ ಇಂಥ ವಿನಾಶಕಾರಿ ಖಾಯಿಲೆಗೆ ತುತ್ತಾದರೆ ನಾಡಿನ ಪಾಡೇನು ? ತುರ್ತು ಚಿಕಿತ್ಸೆ ನಿಮಗೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ