ಮಂಡ್ಯ : ಡಿಕೆ ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶಿವ ಯೋಗೇಶ್ವರ ಸ್ವಾಮೀಜಿ ಭವಿಷ್ಯ ವಾಣಿ ನುಡಿದಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರಿನ ಕುದಲೂರು ಗ್ರಾಮದಲ್ಲಿ ನಡೆದ ಪಟ್ಟಲದಮ್ಮ ದೇವಿಯ ದೀಪೋತ್ಸವದಲ್ಲಿ ಭಾಗಿಯಾಗಿದ್ದ ನೊಣವಿನಕೆರೆ ಕಾಡಸಿದ್ದೇಶ್ವರ ಮಠಾಧ್ಯಕ್ಷರಾದ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೇಶ್ವರ ಸ್ವಾಮೀಜಿಗಳು ಮಾದ್ಯಮಗಳೊಂದಿಗೆ ಮಾತನಾಡಿದ್ದು, ಡಿಕೆ ಶಿವಕುಮಾರ್ ಅವರು ಮುಖ್ಯಂತ್ರಿ ಆಗುತ್ತಾರೆ ಎಂದು ಹೇಳಿದ್ದಾರೆ.
ಸರ್ಕಾರ ಮುಖ್ಯಮಂತ್ರಿ ಆಯ್ಕೆಯ ವಿಚಾರದಲ್ಲಿ ಮೀಸಲಾತಿ ಪ್ರಕಟಿಸುವುದು ಒಳ್ಳೆಯದು. ಅದು ಎಲ್ಲಾ ಸಮುದಾಯದವರಿಗೂ ಅನುಕೂಲವಾಗುತ್ತದೆ. ಎಲ್ಲಾ ಸಮುದಾಯಗಳು ಇನ್ನಷ್ಟು ಹೆಚ್ಚಾಗಿ ಸಂಘಟನೆಯಲ್ಲಿ ಬೆಳೆಯುವವರಿಗೆ ರಾಜಕೀಯದಲ್ಲಿಯೂ ಮೀಸಲಾತಿ ಕೊಟ್ಟು ಮುಂದುವರಿಯುವುದು ಉತ್ತಮ ಎಂದು ಹೇಳಿದ್ದಾರೆ.
ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವ ಎಲ್ಲಾ ಅವಕಾಶಗಳಿವೆ. ಡಿ.ಕೆ. ಶಿವಕುಮಾರ್ ಅವರು ಶ್ರೀಮಠದ ಪರಮ ಭಕ್ತರಾಗಿದ್ದಾರೆ ಎಂದಿದ್ದಾರೆ.
ಶ್ರೀಗಳು ಈ ಹಿಂದೆ ನುಡಿದಿದ್ದ ಅನೇಕರ ರಾಜಕೀಯ ಭವಿಷ್ಯ ನಿಜವಾಗಿದೆ. ಬಸವರಾಜ ಬೊಮ್ಮಾಯಿಯವರು ಕೂಡ ಮುಖ್ಯಮಂತ್ರಿಗಳಾಗುವ ಮೊದಲು ಶ್ರೀ ಮಠಕ್ಕೆ ಭೇಟಿ ನೀಡಿದ್ದರು. ಆ ವೇಳೆ ಬೊಮ್ಮಾಯಿ ಸಿಎಂ ಆಗ್ತಾರೆ ಎಂದು ಶ್ರೀಗಳು ಭವಿಷ್ಯ ಹೇಳಿದ್ದರು. ಅದು ಮುಂದಿನ ದಿನಗಳಲ್ಲಿ ನಿಜವಾಗಿತ್ತು.
ಸದ್ಯ ರಾಜ್ಯದಲ್ಲಿ ಸಿಎಂ, ಡಿಸಿಎಂ, ದಲಿತ ಸಿಎಂ ವಿಚಾರಗಳು ತಣ್ಣಾಗಾಯಿತು ಎನ್ನುವ ಹೊತ್ತಲ್ಲೇ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೇಶ್ವರ ಸ್ವಾಮೀಜಿಗಳು ನೀಡಿರುವ ಈ ಹೇಳಿಕೆ ರಾಜಕೀಯ ವಲಯದಲ್ಲಿ ಮತ್ತೆ ಸಿಎಂ ಚರ್ಚೆಯನ್ನು ಹುಟ್ಟುಹಾಕಿದೆ.
ಶ್ರೀಗಳು ಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕುರಿತಾಗಿ ನುಡಿದಿರುವ ಭವಿಷ್ಯ ವಾಣಿ ಮುಂದಿನ ದಿನಗಳಲ್ಲಿ ನಿಜವಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…