ತಮಿಳುನಾಡಿನ ಈರೋಡ್ ಸಂಸದ ಎ.ಗಣೇಶಮೂರ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದು ಅವರನ್ನು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಂದು ಪಿಟಿಐ ವರದಿ ಮಾಡಿದೆ.
ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷದ ಟಿಕೆಟ್ ಪಡೆದು ಸ್ಪರ್ಧಿಸಿ ಜಯ ಗಳಿಸಿದ್ದ ಗಣೇಶಮೂರ್ತಿ ಇತ್ತೀಚಿನ ಕೆಲ ದಿನಗಳಿಂದ ಮಾನಸಿಕವಾಗಿ ನೊಂದಿದ್ದರು, ಇಂದು ( ಮಾರ್ಚ್ 24 ) ಬೆಳಗ್ಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಇನ್ನು ಇದರ ಕುರಿತಾಗಿ ಅವರ ಕುಟುಂಬಸ್ಥರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಈ ಬಾರಿ ಡಿಎಂಕೆ ಪಕ್ಷ ಈರೋಡ್ ಲೋಕಸಭೆ ಕ್ಷೇತ್ರಕ್ಕೆ ಎ.ಗಣೇಶಮೂರ್ತಿ ಅವರ ಬದಲು ಇ ಪ್ರಕಾಶ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.
ಯಾವುದೇ ಸಮಸ್ಯೆಗೂ ಅತ್ಮಹತ್ಯೆ ಒಂದೇ ಪರಿಹಾರವಲ್ಲ. ನಿಮ್ಮ ತೊಂದರೆಗಳನ್ನು ಆತ್ಮೀಯರ ಜತೆ ಹಂಚಿಕೊಳ್ಳಿ. ಇಲ್ಲವಾದರೆ ಈ ಸಹಾಯವಾಣಿಗೆ ಕರೆಮಾಡಿ ಮಾತನಾಡಿ: 9152987821