ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲೆಡೆ ಅಭ್ಯರ್ಥಿಗಳ ಪ್ರಚಾರ ಜೋರಾಗಿದೆ. ಇನ್ನು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ಕಣಕ್ಕಿಳಿದಿದ್ದು, ಅಬ್ಬರದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.
ಈ ಪ್ರಚಾರದಲ್ಲಿ ಸಿನಿ ಕಲಾವಿದ ಹಾಗೂ ರಾಜ್ಯಸಭಾ ಸದಸ್ಯನಾಗಿರುವ ಜಗ್ಗೇಶ್ ಸಹ ಭಾಗವಹಿಸಿ ಮಾತನಾಡಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಕಿಡಿಕಾರಿದರು. ʼಕುರಿ ಬಲಿ ಕೊಡುವ ಮೊದಲು ಮೆರವಣಿಗೆ ಮಾಡ್ತಾರೆ. ಹರಕೆ ಕುರಿಗೆ ಹಾರ ಹಾಕಿ ಮೆರವಣಿಗೆ ಮಾಡಲಾಗುತ್ತದೆ. ಈ ಹಾರಗಳೇ ಗ್ಯಾರಂಟಿಗಳು. ಮತದಾರರನ್ನು ಬಲಿ ಹಾಕಲು ಗ್ಯಾರಂಟಿಗಳನ್ನು ನೀಡಲಾಗಿದೆ. ಎಷ್ಟೇ ಫ್ರೀ ಸ್ಕೀಮ್ ಕೊಟ್ಟರೂ ಮೋದಿ ಗ್ಯಾರಂಟಿ ಶಾಶ್ವತ. ಫ್ರೀಬೀಸ್ ಇಸ್ಕೊಂಡ್ರೆ ಸ್ವಾಭಿಮಾನ ಮಾರಿಕೊಂಡಂತೆʼ ಎಂದು ಜಗ್ಗೇಶ್ ಹೇಳಿಕೆ ನೀಡಿದರು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…