ನಾನು ಎಷ್ಟು ವರ್ಷ ಬದುಕಿರ್ತಿನೋ ಗೊತ್ತಿಲ್ಲ, ಮತ ಭಿಕ್ಷೆ ನೀಡಿ: ಎಚ್‌.ಡಿ.ದೇವೇಗೌಡ

ವಿಜಯಪುರ: ಸಿಂದಗಿ ಕ್ಷೇತ್ರದ ಉಪ ಚುನಾವಣೆ ಕಣ ರಂಗೇರಿದ್ದು, ತಮ್ಮ ಅಭ್ಯರ್ಥಿಗಳ ಗೆಲುವಿಗೆ ಮೂರು ಪಕ್ಷಗಳ ನಾಯಕರು ಕಸರತ್ತು ನಡೆಸುತ್ತಿದ್ದಾರೆ. ಮತದಾರರನ್ನು ಸೆಳೆಯಲು ನಾನಾ ಶತಪ್ರಯತ್ನ ಮಾಡುತ್ತಿದ್ದಾರೆ.

ಸಿಂದಗಿ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇವೇಗೌಡ ಪ್ರಚಾರ ನಡೆಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಅವರು, ʻನಾನು ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. ನನ್ನ ಜೀವನದ ಕೊನೆಯ ಘಟ್ಟದಲ್ಲಿದ್ದೇನೆ. ಹಾಗಾಗಿ ಮತಭೀಕ್ಷೆ ನೀಡಿ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮತದಾರರಲ್ಲಿ ಮನವಿ ಮಾಡಿದ್ದಾರೆ.

ಸೋಮವಾರ ವಿಜಯಪುರಕ್ಕೆ ಭೇಟಿ ನೀಡಿ, ಜೆಡಿಎಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಮಾಡಿದ ಅವರು, ನಾನು ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. ಈಗಾಗಲೇ 89 ವರ್ಷ ಆಗಿದೆ. ನಾನು ಜೀವನದ ಕೊನೆ ಘಟ್ಟದಲ್ಲಿದ್ದೇನೆ. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಆಡಳಿತಕ್ಕೆ ಬರಬೇಕು. ಅದನ್ನು ನೋಡಬೇಕು. ಅದಕ್ಕಾಗಿ ನಾನು ಮತ ಭಿಕ್ಷೆ ಕೇಳುತ್ತಿದ್ದೇನೆ. ದಯಾಮಾಡಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸಿ ಎಂದು ಮನವಿ ಮಾಡಿಕೊಂಡರು.

× Chat with us