Mysore
21
broken clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೆ ಭೇಟಿ ಮಾಡಿದ ಹೆಚ್‌.ಡಿ.ಕೆ

ಬೆಂಗಳೂರು :  ಕೇಂದ್ರದ ಮಾಜಿ ಸಚಿವರು, ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಬಿಜೆಪಿ ಪಕ್ಷದ ಹಿರಿಯ ನಾಯಕರು ಆಗಿರುವ  ಎಸ್.ಎಂ.ಕೃಷ್ಣ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ. 

 ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಮಾಜಿ ಮುಖ್ಯಮಂತ್ರಿಗಳಾದ ಎಸ್‌.ಎಂ.ಕೃಷ್ಣ ಅವರನ್ನು ಸೌಹಾರ್ದಯುವಾಗಿ ಭೇಟಿ ಮಾಡಿ ಮಾತುಕತೆ ನಡೆಸಲಾಯಿತು ಎಂದು ತಿಳಿಸಿದ್ದಾರೆ. 

ಈ ವೇಳೆ ಪ್ರತಿಪಕ್ಷ ನಾಯಕರಾದ ಆರ್‌.ಅಶೋಕ್‌ , ಮಾಜಿ ಉಪ ಮುಖ್ಯಮಂತ್ರಿಗಳಾದ ಅಶ್ವಥ್‌ನಾರಾಯಣ, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್‌ ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಇಂಡುವಾಳು ಸಚ್ಚಿದಾನಂದ, ಉಮೇಶ್ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags: