ರಾಜಕೀಯ

ಬಾಯಿ ಸರಿ ಇದ್ದಿದ್ದರೆ ನಾನು ಸಿಎಂ ಆಗ್ತಿದ್ನಂತೆ : ಯತ್ನಾಳ್

ಬೆಳಗಾವಿ : ನಿಮ್ಮ ಬಾಯಿ ಸರಿ ಇದ್ದಿದ್ದರೆ ಸಿಎಂ ಆಗುವ ಯೋಗ್ಯತೆ ಇತ್ತು  ಅಂತಾ ಕೆಲವರು ಹೇಳಿದ್ದರು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಇಂದು ಮಾತನಾಡಿರುವ ಯತ್ನಾಳ್‌ ಎಚ್‌.ಡಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ವಿಜಯಪುರಕ್ಕೆ 105 ಕೋಟಿ ರೂ. ನೀಡಿದ್ದರು. ದುರ್ದೈವ ಅಂದರೆ ಬಿಜೆಪಿ ಅಧಿಕಾರಕ್ಕೆ ಬಂದಾಗ ಅದನ್ನು ರದ್ದು ಮಾಡಿತ್ತು. ಯತ್ನಾಳ್‌ ಅವರೇ ನಿಮ್ಮ ಬಾಯಿ ಸರಿ ಇದ್ದಿದ್ದರೆ ಸಿಎಂ ಆಗುವ ಯೋಗ್ಯತೆ ಇತ್ತು ಅಂತಾ ಕೆಲವರು ಹೇಳಿದ್ದರು. ನಾನ್ಯಾರಿಗೂ ಹೆದರುವುದಿಲ್ಲ ಹೇಲಬೇಕಾದ್ದನ್ನು ನೇರವಾಗಿ ಹೇಳ್ತೇನೆ ಎಂದಿದ್ದಾರೆ.
ಪಿಎಸಿಗೆ ಸಿಸಿ ಪಾಟೀಲ್‌ ಅವರನ್ನು ಅಧ್ಯಕ್ಷರನ್ನಾಗಿ ಮಾಡಿ ಸಮಾಧಾನ ಮಾಡಲು ಯತ್ನಿಸುತ್ತಿದ್ದಾರೆ. ಪಂಚಮಸಾಲಿ ಸಮುದಾಯವನ್ನು ಸಮಾಧಾನ ಮಾಡಲು ಹೊರಟಿದ್ದಾರೆ. ಇದಕ್ಕೆ ಮೇಲಿಂದ ಅನುಮತಿ ಪಡೆದಿದ್ದಾರೋ ಇಲ್ಲವೋ ಗೊತ್ತಿಲ್ಲ. ಬೊಮ್ಮಾಯಿ, ಭೈರತಿ ಬಸವರಾಜ್‌ ಅನುದಾನ ನೀಡಿ ನೆರವಾದರು ಅಧಿಕಾರದಲ್ಲಿದ್ದಾಗ ಸಹಾಯ ಮಾಡದವರು ಈಗ ಮಾಜಿಗಳಾಗಿದ್ದಾರೆ. ನಾನು ಟಾರ್ಗೆಟ್‌ ಮಾಡಿದರೆ ಅವರು ಮಾಜಿಯಾಗುವವರೆಗೂ ಬಿಡಲ್ಲ ನಾನು ಒಂಟಿ ಸಲಗ ಇದ್ದೇನೆ. ಒಂಟಿ ಸಲಗ ಆಗಿಯೇ ಹೊಡೆಯುತ್ತೇನೆ ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ.
ಕಳೆದ ಕೆಲ ದಿನಗಳಿಂದ ಯತ್ನಾಳ್‌ ಅವರು ಸ್ವಪಕ್ಷ ನಾಯಕರ ವಿರುದ್ಧವೇ ಗಂಭೀರ ಆರೋಪಗಳನ್ನು ಮಾಡುತ್ತಿದ್ದಾರೆ. ಇಂದೂ ಕೂಡ ಅದೇ ರೀತಿ ಮಾತನಾಡಿರುವ ಯತ್ನಾಳ್‌ ಬಿಜೆಪಿ ನಾಯಕರು ಮುಜುಗರಕ್ಕೀಡಾಗುವಂತೆ ಮಾಡಿದ್ದಾರೆ.
lokesh

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

1 hour ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

5 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

5 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

5 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

5 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

6 hours ago