ಚಿಕ್ಕಮಗಳೂರು : ನನ್ನ ಜೀವನದಲ್ಲಿ ಒಮ್ಮೆಯೂ ಲಂಚ ತೆಗೆದುಕೊಂಡಿಲ್ಲ ಅಂತಾ ಡಿಕೆ ಶಿವಕುಮಾರ್ ಅವರು ಅಜ್ಜಯ್ಯನ ಮಠಕ್ಕೆ ಹೋಗಿ ಪ್ರಮಾಣ ಮಾಡಲಿ ಎಂದು ಮಾಜಿ ಶಾಸಕ ಸಿ.ಟಿ ರವಿ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರು ತಮ್ಮ ಸರ್ಕಾರ ಪ್ರಮಾಣಿಕ ಅನ್ನೋದಾದರೆ ಅಜ್ಜಯ್ಯನ ಮಠಕ್ಕೆ ಹೋಗಿ ಪ್ರಮಾಣ ಮಾಡಲಿ ಎಂದು ಸಿ.ಟಿ ರವಿ ಟಾಂಗ್ ಕೊಟ್ಟಿದ್ದಾರೆ.
ಅಜ್ಜಯ್ಯನ ಮಠದಲ್ಲಿ ಪ್ರಮಾಣ ಮಾಡಲಿ ಅನ್ನುವುದು ನಮ್ಮ ಆರೋಪವಲ್ಲ. ಬಿಬಿಎಂಪಿ ಗುತ್ತಿಗೆದಾರರ ಸಂಘದ ಆರೋಪ. ಡಿಕೆಶಿಗೆ ಅಜ್ಜಯ್ಯನ ಮಠದ ಬಗ್ಗೆ ಭಕ್ತಿ ಇರುವುದರಿಂದ ಅಲ್ಲಿಗೆ ಕರೆದಿದ್ದಾರೆ. ನಾವು ತಪ್ಪೇ ಮಾಡಿಲ್ಲ ಅನ್ನೋದಾದ್ರೆ ಹೋಗಿ ಪ್ರಮಾಣ ಮಾಡಬಹುದಲ್ವಾ? ಎಂದು ಪ್ರಶ್ನಿಸಿದ್ದಾರೆ.
ಗುತ್ತಿಗೆದಾರರ ಬಳಿ ನಾನು ಮಾಹಿತಿ ಪಡೆದುಕೊಂಡಿದ್ದೇನೆ. ಮೊದಲು ಹಳೇಯದ್ದಕ್ಕೆಲ್ಲಾ ಸೇರಿಸಿ 7% ಫಿಕ್ಸ್ ಮಾಡಿದ್ರು, ಮದ್ಯವರ್ತಿಗಳು 10% ಅಂದ್ರು ಆಮೇಲೆ ಚರ್ಚೆ ಮಾಡಿ 15% ಆದ್ರೆ ಮಾತ್ರ ಕ್ಲಿಯರ್ ಅಂತಾ ಹೇಳಿದ್ದಾರೆ. ಆರೋಪ ಗುತ್ತಿಗೆದಾರರ ಸಂಘದ್ದು, ಸುಳ್ಳು ಅನ್ನೊದಾದರೆ ಅಜ್ಜಯ್ಯನ ಮಠಕ್ಕೆ ಹೋಗಿ ಸತ್ಯ ಮಾಡಲಿ. ಸತ್ಯ ಮಾಡುವಾಗ ನನ್ನ ಜೀವನದಲ್ಲೇ ಲಂಚ ತೆಗೆದುಕೊಂಡಿಲ್ಲ ಎಂದು ಹೇಳಿದ್ರೆ ಸಾಕು, ಬೇರೆ ಸಾಕ್ಷಿಯೇ ಬೇಕಾಗಿಲ್ಲ ಎಂದು ಹೇಳಿದ್ದಾರೆ.
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…