ನವದೆಹಲಿ : ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ವಿಪಕ್ಷಗಳ ಆರೋಪ ಹೊಸದಲ್ಲ. ಸಂಸತ್ ಸಾಕ್ಷಿಯಾಗಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಆಡಿದ ಮಾತುಗಳು ಇದಕ್ಕೆ ಪೂರಕವಾಗಿವೆ.
ದೆಹಲಿ ಆಡಳಿತ ಸೇವೆಗಳ ನಿಯಂತ್ರಣ ವಿಧೇಯಕ ವಿರೋಧಿಸಿ ವಿಪಕ್ಷಗಳು ಗದ್ದಲ ಮಾಡುತ್ತಿದ್ದ ಸಂದರ್ಭದಲ್ಲಿ ಸಿಟ್ಟಿಗೆದ್ದ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ, ವಿಪಕ್ಷ ನಾಯಕರು ಸೈಲೆಂಟಾಗಿ ಇರದಿದ್ರೆ ಅವರ ಮನೆಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬರುತ್ತಾರೆ ಎಂದು ನೇರವಾಗಿ ಎಚ್ಚರಿಕೆ ನೀಡಿದ್ದಾರೆ.
ಮೀನಾಕ್ಷಿ ಲೇಖಿಯ ಮಾತುಗಳು ರಾಷ್ಟ್ರ ರಾಜಕೀಯದಲ್ಲೀಗ ಸಂಚಲನ ಮೂಡಿಸಿವೆ. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ನಮ್ಮ ಮಾತು ನಿಜ ಎಂದು ಕೇಂದ್ರ ಸಚಿವರೇ ಈಗ ಒಪ್ಕೊಂಡಿದ್ದಾರೆ. ಆವೇಶದಲ್ಲಿ ಮೀನಾಕ್ಷಿ ಲೇಖಿ ವಿಪಕ್ಷಗಳನ್ನು ಬೆದರಿಸುವ ಪ್ರಯತ್ನ ನಡೆಸಿದ್ದಾರೆ ಎಂದು ಎನ್‍ಸಿಪಿ ಹೇಳಿದೆ.
ಈ ಸಂಬಂಧ ಯುವ ಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್ ಟ್ವೀಟ್ ಮಾಡಿ, ಇದು ಎಚ್ಚರಿಕೆನಾ? ಬೆದರಿಕೆನಾ ಎಂದು ಕೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟಿಎಂಸಿ ಸೇರಿ ಹಲವು ಪಕ್ಷಗಳು ಮೋದಿ ಸರ್ಕಾರದ ವಿರುದ್ಧ ಮುಗಿಬಿದ್ದಿವೆ.
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…
ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…
ಬೆಳಗಾವಿ : ಡಿನ್ನರ್ ಬ್ರೇಕ್‌ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…