ರಾಜಕೀಯ

ಭೇಟಿಯಾಗದ ಅಮಿತ್‌ ಶಾ; ಶಿವಮೊಗ್ಗದಿಂದ ಈಶ್ವರಪ್ಪ ಸ್ಪರ್ಧೆ ಖಚಿತ?

ಹೊಸದಿಲ್ಲಿ: ತಮ್ಮ ಪುತ್ರನಿಗೆ ಈ ಬಾರಿಯ ಲೋಕಸಭೆಯಲ್ಲಿ ಸ್ಪರ್ಧಿಸುವ ಅವಕಾಶ ಸಿಗದ ಕಾರಣ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಆಕ್ರೋಶಗೊಂಡು ಬಂಡಾಯ ಸಾರಿರುವ ಕೆ.ಎಸ್‌ ಈಶ್ವರಪ್ಪ ವಿರುದ್ಧ ಮೊನ್ನೆ ರಾಜ್ಯಕ್ಕೆ ಆಗಮಿಸಿದ್ದ ಅಮಿತ್‌ ಶಾಗೆ ದೂರನ್ನು ನೀಡಲಾಗಿತ್ತು.

ಇನ್ನು ಈಶ್ವರಪ್ಪ ಅವರನ್ನು ಭೇಟಿಯಾಗಲು ಅಮಿತ್‌ ಶಾ ತೀರ್ಮಾನಿಸಿದ್ದು, ನಿನ್ನೆ ( ಏಪ್ರಿಲ್‌ 3 ) ಭೇಟಿಯಾಗುವುದಾಗಿ ಸೂಚಿಸಿದ್ದರು. ಅದರಂತೆ ನಿನ್ನೆ ಸಂಜೆ ಈಶ್ವರಪ್ಪ ದೆಹಲಿ ತಲುಪಿದ್ದರು. ರಾತ್ರಿ 10ರ ಬಳಿಕ ಸಮಯ ನಿಗದಿಯಾಗಿತ್ತು ಎಂದು ಮೂಲಗಳು ತಿಳಿಸಿದ್ದವು.

ಆದರೆ ಬಳಿಕ ಅಮಿತ್‌ ಶಾ ಭೇಟಿಯಾಗುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು ಈಶ್ವರಪ್ಪ ಮಾಧ್ಯಮದವರ ಜತೆ ಮಾತನಾಡಿದ್ದಾರೆ. ʼಇಂದು ರಾತ್ರಿ 10 ಗಂಟೆಯ ಬಳಿಕ ಅಮಿತ್‌ ಶಾ ಅವರನ್ನು ಭೇಟಿಗೆ ಸಮಯ ನಿಗದಿಯಾಗಿತ್ತು. ಆದರೆ, ಅಮಿತ್‌ ಶಾ ಅವರು ಭೇಟಿಗೆ ಲಭ್ಯವಿರುವುದಿಲ್ಲ ಎಂಬ ಮಾಹಿತಿ ಬಂದಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಲೋಕಸಭೆ ಚುನಾವಣೆಯಲ್ಲಿ ಸೋಲಲಿ ಎನ್ನುವ ಅಪೇಕ್ಷೆ ಕೇಂದ್ರ ಸಚಿವ ಅಮಿತ್‌ ಶಾ ಅವರಿಗೆ ಇರಬಹುದುʼ ಎಂದು ಹೇಳಿಕೆ ನೀಡಿ ಶಿವಮೊಗ್ಗದಿಂದ ಸ್ಪರ್ಧೆ ಖಚಿತ ಎಂಬುದನ್ನು ಪರೋಕ್ಷವಾಗಿ ತಿಳಿಸಿದರು.

andolana

Recent Posts

ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಅಸಾದುದ್ದೀನ್ ಓವೈಸಿ ಕಿಡಿ

ನವದೆಹಲಿ: ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಎಐಎಂಐಎಂ ನಾಯಕ ಅಸಾದುದ್ದೀನ್‌ ಓವೈಸಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ…

8 mins ago

ಇಂದು ಮುನಿರತ್ನ ಜಾಮೀನು ಅರ್ಜಿ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ…

12 mins ago

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಈ ಕ್ರಮ ವಿರೋಧಿಸುತ್ತಿರುವ ಕಾಂಗ್ರೆಸ್‌: ಆರ್‌.ಅಶೋಕ

ರಾಹುಲ್‌ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…

7 hours ago

ರೀಲ್ಸ್‌ ಪ್ರಿಯರಿಗೆ ಭರ್ಜರಿ ಆಫರ್:‌ ರೀಲ್ಸ್ ಟ್ಯಾಗ್ ಮಾಡಿ ಬಹುಮಾನ ಗೆಲ್ಲಿ

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್‌ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…

7 hours ago

ʻಕಾಟೇರʼನಿಗೆ ಕೋಳ ಬಿದ್ದು 100 ದಿನ: ಇಲ್ಲಿಯವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್…‌

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…

8 hours ago

ಕೃಷಿ ತಂತ್ರಜ್ಞಾನ ವರ್ಗಾವಣೆ ರಾಜ್ಯ ಸರ್ಕಾರದ ಆದ್ಯತೆ: ಎನ್ ಚಲುವರಾಯಸ್ವಾಮಿ

ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…

9 hours ago