ರಾಜಕೀಯ

ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ: ಸಿ.ಎಂ ಸಿದ್ದರಾಮಯ್ಯ

  • ರಾಜ್ಯಕ್ಕೆ ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡರು ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಏಕೆ: ಸಿ.ಎಂ.ಪ್ರಶ್ನೆ
  • ನಿರುದ್ಯೋಗಿಗಳಿಗೆ ಪಕೋಡ ಮಾರಾಟ ಮಾಡಿ ಎಂದಿದ್ದು ಮೋದಿ ಮಾಡಿದ ನಂಬಿಕೆ ದ್ರೋಹ ಅಲ್ಲವೇ? ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ. ನಿಮಗಾದ ಮಹಾದ್ರೋಹಕ್ಕೆ ತಕ್ಕ ಪಾಠ ಕಲಿಸಿ: ಸಿ.ಎಂ ಕರೆ
  • ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದ ಮೋದಿ ಸರ್ಕಾರ ಪ್ರತಿಭಟನಾನಿರತ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಮಹಾದ್ರೋಹ ಅಲ್ಲವೇ: ಸಿ.ಎಂ ಪ್ರಶ್ನೆ

 

ಹಾಸನ : ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನಂಬಿಕೆ ದ್ರೋಹ ಮಾಡಲ್ಲ. ನುಡಿದಂತೆ ನಡೆದು ತೋರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್ ಪರವಾಗಿ ನಡೆದ ಬೃಹತ್ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವು ಕೇವಲ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ಬಕ್ರಾ ಮಾಡುವುದಿಲ್ಲ. ನಿಮ್ಮ ಬದುಕಿನ ಸಂಕಷ್ಟಗಳ ಜತೆಗೆ ನಿಲ್ಲುತ್ತೇವೆ ಎಂದರು.

ರಾಜ್ಯಕ್ಕೆ ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡರು ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಏಕೆ ಎಂದು ಸಿ.ಎಂ ಪ್ರಶ್ನಿಸಿದರು.

ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಕೊಡುವುದಾಗಿ ಬಜೆಟ್ ನಲ್ಲಿ ಘೋಷಿಸಿದರು. ಆದರೆ ಇದುವರೆಗೂ ಒಂದೇ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡದೆ ವಂಚಿಸಿದ್ದಾರೆ. ಈ ವಂಚನೆಯನ್ನು ಪ್ರಶ್ನಿಸುವುದನ್ನು ಬಿಟ್ಟ ಜೆಡಿಎಸ್ ನವರು ಹೋಗಿ ಬಿಜೆಪಿ ಜತೆಗೇ ಜಮೆಯಾಗಿದ್ದಾರೆ. ಇದು ಪ್ರಜ್ವಲ್ ರೇವಣ್ಣ ಅವರು ತಮಗೆ ಮತ ಹಾಕಿದವರಿಗೆ ಮಾಡಿದ ದ್ರೋಹ ಅಲ್ಲವೇ ಎಂದು ಪ್ರಶ್ನಿಸಿದರು.

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದಿದ್ದ ಮೋದಿಯವರನ್ನು ನೀವೂ ನಂಬಿದ್ರಿ. ಭಾರತೀಯರೆಲ್ಲರೂ ನಂಬಿದ್ರು. ಆದರೆ, ಉದ್ಯೋಗ ಕೊಡಿ ಅಂದಾಗ, ಹೋಗಿ ಪಕೋಡ ಮಾರಾಟ ಮಾಡಿ ಅಂದ್ರು. ಇದು ವಿದ್ಯಾವಂತ ಯುವಕ/ ಯುವತಿಯರಿಗೆ ಮೋದಿ ಮಾಡಿದ ನಂಬಿಕೆ ದ್ರೋಹ ಅಲ್ಲವೇ? ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ ಎಂದು ಪ್ರಶ್ನಿಸಿದರು.

ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದ ಮೋದಿ ಸರ್ಕಾರ ಪ್ರತಿಭಟನಾನಿರತ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಮಹಾದ್ರೋಹ ಅಲ್ಲವೇ. ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿದ ರೈತರ ಮೇಲೆ ಬಿಜೆಪಿ ನಡೆಸಿದ ದೌರ್ಜನ್ಯ ಒಂದಾ ಎರಡಾ? ಈಗ ಆ ದೌರ್ಜನ್ಯಗಳಿಗೆ ತಕ್ಕ ಪಾಠ ಕಲಿಸುವ ಸಂದರ್ಭ ಬಂದಿದೆ ಎಂದರು.

ಮೋದಿ ಅವರ ದರ್ಬಾರ್ ನಲ್ಲಿ ಆದ ಬೆಲೆ ಏರಿಕೆಯಿಂದ ಬಸವಳಿದಿದ್ದ ರಾಜ್ಯದ ಜನತೆಯ ಸಂಕಷ್ಟಕ್ಕೆ ಸ್ಪಂದಿಸುವ ಸಲುವಾಗಿ ನಾವು ಐದು ಗ್ಯಾರಂಟಿಗಳನ್ನು ರೂಪಿಸಿದೆವು. ಜಾರಿ ಮಾಡಿದೆವು. ನಾನು ನುಡಿದಂತೆ ನಡೆದಂತೆ ನಡೆದಿದ್ದೇವೆ. ಮೋದಿಯವರಂತೆ ಭಾರತೀಯರನ್ನು ನಾವು ನಂಬಿಸಿ ದ್ರೋಹ ಬಗೆಯಲ್ಲ ಎಂದು ತಿಳಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

Padma awards | ಪದ್ಮ ಪುರಸ್ಕಾರಕ್ಕೆ ನಾಮನಿರ್ದೇಶನ ಆರಂಭ

ಹೊಸದಿಲ್ಲಿ: ಮುಂದಿನ ವರ್ಷದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪುರಸ್ಕಾರಕ್ಕೆ ಆನ್‌ಲೈನ್‌ನಲ್ಲಿ ನಾಮನಿರ್ದೇಶನ ಪ್ರಕ್ರಿಯೆ ಪ್ರಾರಂಭವಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ…

30 seconds ago

ಮಹಾವೀರರ ತತ್ವದಿಂದ ವಿಶ್ವಶಾಂತಿ ಸಾಧ್ಯ

ಮೈಸೂರು : ಭಗವಾನ್‌ ಮಹಾವೀರ ಆದರ್ಶ ಹಾಗೂ ತತ್ವಗಳು ಅಮೂಲ್ಯವಾದವು. ಅವರ ತತ್ವ ಪಾಲಿಸದರೆ ವಿಶ್ವದಲ್ಲಿ ಶಾಂತಿ, ನೆಮ್ಮದಿ ಉಂಟಾಗಲಿದೆ…

34 mins ago

ಸಾಂಸ್ಕೃತಿಕ ನಾಯಕರನ್ನು ಜಾತಿಯಿಂದ ಬಿಡುಗಡೆಗೊಳಿಸಿ ; ಪ್ರೊ.ಅರವಿಂದ ಮಾಲಗತ್ತಿ

ಮೈಸೂರು :  ಸಾಂಸ್ಕೃತಿಕ ನಾಯಕರನ್ನು ಜಾತಿಯಿಂದ ಬಿಡುಗಡೆಗೊಳಿಸಿದರೆ ಅವರ ಶಕ್ತಿ ವೃದ್ಧಿಸುತ್ತದೆ ಎಂದು ಖ್ಯಾತ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಹೇಳಿದರು.…

52 mins ago

ಮೈಸೂರು | ಅತ್ಯಾಚಾರ ಖಂಡಿಸಿ ಏಕಾಂಗಿ ಪ್ರತಿಭಟನೆ

ಮೈಸೂರು: ಉತ್ತರ ಪ್ರದೇಶದ ವಾರಣಾಸಿಯಲ್ಲಿ 19 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಿರುವುದನ್ನು ಖಂಡಿಸಿ ಗಂಧದಗುಡಿ ಫೌಂಡೇಶನ್‌ನ ಅಧ್ಯಕ್ಷ ಆರ್ಯನ್…

2 hours ago

ಮುಂಬೈ ದಾಳಿಕೋರ ರಾಣಾ ಹಸ್ತಾಂತರ ಯಶಸ್ವಿ ; ಎನ್‌ಐಎ

ಹೊಸದಿಲ್ಲಿ: ಮುಂಬೈ ದಾಳಿಯ ಸಂಚುಕೋರ ತಹವ್ವೂರ್‌ ರಾಣಾ ಹಸ್ತಾಂತರ ಯಶಸ್ವಿಯಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಿಳಿಸಿದೆ. 26/11ರ…

3 hours ago

ಮೈಸೂರು, ಕೊಡಗಿನಲ್ಲಿ ಇಂದು ಮತ್ತು ನಾಳೆ ಮಳೆ ಸಾಧ್ಯತೆ

ಮೈಸೂರು  :  ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಚದುರಿದಂತೆ ಅಲ್ಲಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಮೈಸೂರು,…

3 hours ago