ರಾಜಕೀಯ

ಸಂಸದ ಡಿಕೆ ಸುರೇಶ್‌ ಬರೋಬ್ಬರಿ 598 ಕೋಟಿ ರೂ ಆಸ್ತಿಗೆ ಒಡೆಯ!

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯಲಿದ್ದು, ಅದರ ಹಿನ್ನೆಲೆ ಇಂದು ನಾಮಪತ್ರ ಸಲ್ಲಿಕೆ ಆರಂಭವಾಗಿದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ ಸುರೇಶ್‌ ಅವರು ಇಂದು ನಾಮಪತ್ರ ಸಲ್ಲಿಸಿದ್ದು ತಮ್ಮ ಆಸ್ತಿಯನ್ನು ಮೌಲ್ಯವನ್ನು ಘೋಷಿಸಿದ್ದಾರೆ. 598 ಕೋಟಿ ರೂಪಾಯಿಗೆ ಒಡೆಯರಾಗಿದ್ದಾರೆ ಡಿಕೆ ಸುರೇಶ್‌. ಕಳೆದ 5 ವರ್ಷದಲ್ಲಿ 259.19 ಕೋಟಿ ರೂಪಾಯಿಯಷ್ಟು ಆಸ್ತಿ ಮೌಲ್ಯ ಹೆಚ್ಚಳವಾಗಿದೆ. ಜೊತೆಗೆ 207 ಕೋಟಿ ರೂಪಾಯಿ ಸಾಲವಿದೆ. ಡಿಸಿಎಂ ಡಿಕೆ ಶಿವಕುಮಾರ್‌ ಅವರ ಕಿರಿಯ ಸಹೋದರ ಸುರೇಶ್‌ ಅವರು 2019ರ ಸಾರ್ವತ್ರಿಕ ಚುನಾವಣೆಗೆ ಮುನ್ನ 339 ಕೋಟಿ ರೂಪಾಯಿ ಆಸ್ತಿಯನ್ನು ಘೋಷಿಸಿದ್ದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿರುವ ಅವರು ಪುನರಾಯ್ಕೆ ಬಯಸಿ ಇಂದು ಸಲ್ಲಿಸಿದ ನಾಮಪತ್ರದ ಜತೆಗೆ ಸಲ್ಲಿಸಿರುವ ಅಫಿಡವಿಟ್‌ ಪ್ರಕಾರ ಬ್ಯಾಂಕ್‌ಗಳಲ್ಲಿ 16.61 ಕೋಟಿ ರೂಪಾಯಿ ಠೇವಣಿ ಹೊಂದಿದ್ದಾರೆ. 21 ಸ್ಥಳಗಳಲ್ಲಿ 32.76 ಕೋಟಿ ಮೌಲ್ಯದ ಕೃಷಿ ಭೂಮಿ, 210.47 ಕೋಟಿ ಮೌಲ್ಯದ 27 ಸ್ಥಳಗಳಲ್ಲಿ ಕೃಷಿಯೇತರ ಭೂಮಿ, 211.91 ಕೋಟಿ ಮೌಲ್ಯದ ಒಂಬತ್ತು ವಾಣಿಜ್ಯ ಕಟ್ಟಡಗಳು ಹಾಗೂ 27.13 ಕೋಟಿ ಮೌಲ್ಯದ ಮೂರು ವಸತಿ ಕಟ್ಟಡಗಳನ್ನು ಹೊಂದಿದ್ದಾರೆ. ಇನ್ನು ಡಿ.ಕೆ. ಸುರೇಶ್ ಸ್ವಂತ ಕಾರು ಹೊಂದಿಲ್ಲ. ಮನೆಯಲ್ಲಿ 70 ಲಕ್ಷ ರೂಪಾಯಿ ಮೌಲ್ಯದ ಪೀಠೋಪಕರಣವನ್ನು ಹೊಂದಿರುವುದಾಗಿ ಅಫಿಡವಿಟ್‌ನಲ್ಲಿ ಘೋಷಿಸಿದ್ದಾರೆ.

andolana

Recent Posts

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

43 mins ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

59 mins ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

1 hour ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

2 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

2 hours ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

3 hours ago