ರಾಮನಗರ: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ಜೋರಾಗಿದೆ. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ( ಏಪ್ರಿಲ್ 4 ) ಕೊನೆಯ ದಿನವಾಗಿದ್ದು, ಹಲವು ಅಭ್ಯರ್ಥಿಗಳು ಬೆಳಗ್ಗೆಯೇ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಇನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ. ಸಿಎನ್ ಮಂಜುನಾಥ್ ಹಾಗೂ ಡಿಕೆ ಸುರೇಶ್ ಅವರ ಸ್ಪರ್ಧೆ ಈಗಾಗಲೇ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಇಬ್ಬರೂ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಇದರ ಜತೆಗೆ ಡಾ ಸಿ.ಎನ್ ಮಂಜುನಾಥ್ ಹೆಸರನ್ನು ಹೋಲುವ ಮತ್ತೊಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ.
ಚನ್ನರಾಯಪಟ್ಟಣ ಮೂಲದ ಡಾ ಸಿ.ಎನ್ ಮಂಜುನಾಥ್ ಬಹುಜನ ಭಾರತ್ ಪಾರ್ಟಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿದ್ದಾರೆ. ಈ ಕುರಿತು ಬಿಜೆಪಿ ಕಾರ್ಯಕರ್ತರು ಪ್ರತಿಕ್ರಿಯಿಸಿದ್ದು, ಇವರು ಸಲ್ಲಿಸಿರುವ ವಿಶ್ವವಿದ್ಯಾಲಯದ ಸರ್ಟಿಫಿಕೇಟ್ ನಕಲಿ ಎಂದು ಆರೋಪಿಸಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಡಾ. ಸಿಎನ್ ಮಂಜುನಾಥ್ ಗ್ಲೋಬಲ್ ಹ್ಯೂಮನ್ ಪೀಸ್ ಯೂನಿವರ್ಸಿಟಿಯಿಂದ ಸಮಾಜ ಸೇವೆಗಾಗಿ ಡಾಕ್ಟರೇಟ್ ಪಡೆದುಕೊಂಡಿದ್ದಾರೆ. ಆದರೆ, ನಕಲಿ ವಿಶ್ವವಿದ್ಯಾಲಯದ ಸರ್ಟಿಫಿಕೇಟ್ ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು, ಈ ಕುರಿತು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲು ಚಿಂತನೆ ನಡೆಸಿದೆ.
ಇನ್ನು ಈ ಕ್ಷೇತ್ರದಲ್ಲಿ ಮಂಜುನಾಥ್ ಎಂಬ ಸ್ಪರ್ಧಿಗಳ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಬಿಜೆಪಿಯ ಡಾ ಸಿಎನ್ ಮಂಜುನಾಥ್, ಬಹುಜನ ಭಾರತ್ ಪಾರ್ಟಿಯ ಡಾ ಸಿಎನ್ ಮಂಜುನಾಥ್, ಪಕ್ಷೇತರರಾಗಿ ಸಿ ಮಂಜುನಾಥ್, ಎನ್ ಮಂಜುನಾಥ್ ಹಾಗೂ ಕೆ ಮಂಜುನಾಥ್ ನಾಮಪತ್ರ ಸಲ್ಲಿಸಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…