ರಾಜಕೀಯ

ಮಾಲ್ಡೀವ್ಸ್‌ ಅಧಿವೇಶನದಲ್ಲಿ ಸಂಸದರ ಬಡಿದಾಟ !

ಮಾಲೆ :   ಮಾಲ್ಡೀವ್ಸ್ ಅಧ್ಯಕ್ಷ ಮುಹಮ್ಮದ್ ಮುಯಿಝ್ಝು ಸಂಪುಟ ಸಚಿವರ ನೇಮಕಕ್ಕೆ ಅನುಮೋದನೆ ಪಡೆಯಲು ಕರೆದಿದ್ದ ವಿಶೇಷ ಅಧಿವೇಶನದಲ್ಲಿ ಸಂಸದರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಮಾಲ್ಡೀವ್ಸ್ ಸಂಸತ್ತಿನಲ್ಲಿ ನಡೆದಿದೆ ಎಂದು indiatoday.in ವರದಿ ಮಾಡಿದೆ.

ಕ್ರಮವಾಗಿ ಆಡಳಿತಾರೂಢ ಮತ್ತು ವಿರೋಧ ಪಕ್ಷಗಳ ಮೈತ್ರಿಕೂಟಗಳಾದ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ ಹಾಗೂ ಪ್ರೊಗ್ರೆಸಿವ್ ಪಾರ್ಟಿ ಆಫ್ ಮಾಲ್ಡೀವ್ಸ್ ಸಂಸದರ ನಡುವೆ ಘರ್ಷಣೆ ನಡೆದಿದ್ದರಿಂದ ಸಂಸತ್ತಿನಲ್ಲಿ ಕೋಲಾಹಲ ಸೃಷ್ಟಿಯಾಯಿತು.

ಅಂತರ್ಜಾಲದಲ್ಲಿ ಕಂಡು ಬರುತ್ತಿರುವ ವಿಡಿಯೊಗಳ ಪ್ರಕಾರ, ಸಂಸದರು ಪರಸ್ಪರ ಗುದ್ದಾಡಿಕೊಂಡಿದ್ದರಿಂದ ಸಂಸತ್ತಿನಲ್ಲಿ ಕೋಲಾಹಲ ಸೃಷ್ಟಿಯಾಗಿದೆ.

ವ್ಯಾಪಕವಾಗಿ ಹಂಚಿಕೆಯಾಗಿರುವ ಕೆಲವು ವಿಡಿಯೊ ತುಣುಕುಗಳ ಪ್ರಕಾರ, ಕೆಲವು ಸಂಸದರು ಪರಸ್ಪರ ವೇದಿಕೆಯಿಂದ ಕೆಳಗೆ ತಳ್ಳಿಕೊಂಡಿರುವ ಘಟನೆಗಳೂ ಸೆರೆಯಾಗಿವೆ.

ಈ ವಿಡಿಯೊವನ್ನು ಮಾಲ್ಡೀವ್ಸ್ ನ ಸ್ಥಳೀಯ ಸುದ್ದಿ ಸಂಸ್ಥೆಯಾದ ಅಧಂಧು ಕೂಡಾ ಹಂಚಿಕೊಂಡಿದೆ.

ಅಧಂಧು ಸುದ್ದಿ ಸಂಸ್ಥೆಯ ಪ್ರಕಾರ, ವಿರೋಧ ಪಕ್ಷಗಳ ಸಂಸದರನ್ನು ಆಡಳಿತಾರೂಢ ಪಕ್ಷದ ಸಂಸದರು ಸಂಸತ್ತನ್ನು ಪ್ರವೇಶಿಸುವುದರಿಂದ ತಡೆದಿದ್ದಾರೆ.

ಮಾಲ್ಡೀವ್ಸ್ ಸಂಸತ್ತಿನಲ್ಲಿ ಬಹುಮತ ಹೊಂದಿರುವ ಎಂಡಿಪಿಯು, ಆಡಳಿತಾರೂಢ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝ್ಝು ಸಂಪುಟವನ್ನು ತನ್ನ ಪಕ್ಷದ ನಾಲ್ವರು ಸದಸ್ಯರು ಸೇರ್ಪಡೆಯಾಗುವುದಕ್ಕೆ ಅನುಮೋದನೆ ನೀಡದೆ ಇದ್ದುದರಿಂದ ಅವರು ಇಂತಹ ನಡೆ ಅನುಸರಿಸಿದರು ಎಂದು ಹೇಳಲಾಗಿದೆ.

ಈ ಕುರಿತು ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ಪಿಎನ್‍ಸಿ ಮತ್ತು ಪಿಪಿಎಂ, ಎಂಡಿಪಿಯು ತನ್ನ ನಾಲ್ವರು ಸದಸ್ಯರು ಸಂಪುಟ ಸೇರ್ಪಡೆಯಾಗಲು ಅನುಮೋದನೆ ನೀಡದಿರುವ ನಡೆಯಿಂದ ಜನರಿಗೆ ಸೇವೆ ಒದಗಿಸಲು ತೊಂದರೆ ಉಂಟಾಗಿದೆ ಎಂದು ಹೇಳಿವೆ.

ಸಂಸತ್ತಿನೊಳಗಿನ ಚಿತ್ರೀಕರಿಸಿರುವ ವಿಡಿಯೊಗಳಲ್ಲಿ ಸಂಸದರು ಪರಸ್ಪರ ನೆಲದ ಮೇಲೆ ಗುದ್ದಾಡುತ್ತಿರುವುದು ಹಾಗೂ ಓರ್ವ ಸಂಸದನ ಕೂದಲನ್ನು ಕೀಳುತ್ತಿರುವುದೂ ಸೆರೆಯಾಗಿದೆ.

ಕೂದಲು ಕೀಳಲ್ಪಟ್ಟ ಸಂಸದನು ಸಭಾಧ್ಯಕ್ಷರು ಸಂಸತ್ತನ್ನು ಉದ್ದೇಶಿಸಿ ಮಾತನಾಡದಂತೆ ತಡೆ ಒಡ್ಡಲು ತುತ್ತೂರಿಯಂಥ ವಾದನವನ್ನು ಊದುತ್ತಿರುವುದೂ ವಿಡಿಯೊದಲ್ಲಿ ಸೆರೆಯಾಗಿದೆ.

andolanait

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

16 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

17 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

18 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

19 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

22 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

22 hours ago