ಜಿ.ಟಿ.ದೇವೇಗೌಡ್ರು ರಾಜಕೀಯವಾಗಿ ಸಿದ್ದರಾಮಯ್ಯರೊಂದಿಗೆ ಬಹಳ ವರ್ಷ ಜೊತೆಗಿದ್ದವ್ರು: ಶಾಸಕ ಯತೀಂದ್ರ

ಕೊಡಗು: ನಮ್ಮಲ್ಲಿ ಯಾವುದೇ ಬಣ ರಾಜಕೀಯ ಇಲ್ಲ. ಕಾಂಗ್ರೆಸ್‌ನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು‌ ನಮ್ಮ ಗುರಿ. ಆ ನಿಟ್ಟಿನಲ್ಲಿ ಎಲ್ಲಾ ನಾಯಕರು ಒಟ್ಟಾಗಿ ಕೈಜೋಡಿಸಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಜಿ.ಟಿ.ದೇವೆಗೌಡ ಕಾಂಗ್ರೆಸ್ ಸೇರುವ ವಿಚಾರವಾಗಿ ಮಾತನಾಡಿ, ಜಿ.ಟಿ.ದೇವೇಗೌಡ ಅವರು ಬಹಳ ವರ್ಷ ಸಿದ್ದರಾಮಯ್ಯ ಅವರೊಂದಿಗೆ ಇದ್ದವರು. ಈಗ ಕಾಂಗ್ರೆಸ್‌ನತ್ತ ಒಲವು ತೋರಿದ್ದಾರೆ. ರಾಜಕೀಯದಲ್ಲಿ ಶಾಶ್ವತವಾಗಿ ಯಾರೂ ಶತ್ರು ಅಥವಾ ಮಿತ್ರ ಇಲ್ಲ. ಈ ಬಗ್ಗೆ ಪಕ್ಷದ ನಾಯಕರ ತೀರ್ಮಾನಕ್ಕೆ ನಾವು ಬದ್ಧ ಎಂದು ಸ್ಪಷ್ಟಪಡಿಸಿದರು.

× Chat with us