ಮೈಸೂರು : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇಷ್ಟು ವರ್ಷಗಳತಾವಧಿಯಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಪ್ರಯತ್ನಿಸಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಭರವಸೆ ನೀಡಿದ್ದರು ಆದರೆ ಅವರು ಹೇಳಿದಂತೆ ನಡೆದುಕೊಳ್ಳಲಿಲ್ಲ ಬದಲಾಗಿ ಪದವೀಧರರಿಗೆ ಸೂಕ್ತ ಉದ್ಯೋಗ ನೀಡದೆ ಬೀದಿ ಪಾಲಾಗಿಸಿದ್ದಾರೆ. ಎಂದು ಕೆಪಿಸಿಸಿ ಮಹಿಳಾ ಘಟಕದ ಆದ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಅವರು ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೋದಿ ಸರ್ಕಾರ ಮೀಸಲಾತಿ ತೆಗೆಯುವ ಹುನ್ನಾರದಿಂದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗೀಕರಣ ಮಾಡುತ್ತಿದೆ. ಈಗಲಾದರೂ ಪದವೀಧರರು ಎಚ್ಚೆತ್ತುಕೊಳ್ಳುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಯಾದ ಮಧು.ಜಿ. ಮಾದೇಗೌಡ ಅವರಿಗೆ ಮತ ಹಾಕುವ ಮೂಲಕ ಬೆಂಬಲಿಸಬೇಕೆಂದರು.
ಈ ಸಂದರ್ಭದಲ್ಲಿ ನಗರ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪುಷ್ಪಾಲತಾ ಚಿಕ್ಕಣ್ಣ, ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷೆ ಲತಾ ಸಿದ್ದಶೆಟ್ಟಿ ಸೇರಿದಂತೆ ಲತಾ ಮೋಹನ್, ರಾಧಾಮಣಿ, ವೀಣಾ, ಸುಜಾತಾ ರಾವ್, ಮಮತಾ ಇದ್ದರು.