Mysore
23
overcast clouds
Light
Dark

ಕಾಂಗ್ರೆಸ್ ಕಿತ್ತೊಗೆಯುವುದೇ ನಮ್ಮ ಗುರಿ : ಆರ್ ಅಶೋಕ್

ಬೆಂಗಳೂರು : ವಿಪಕ್ಷ ನಾಯಕನಾಗಿ ಗದ್ದುಗೆ ಏರುತ್ತಿದ್ದಂತೆಯೇ ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ವಿಪಕ್ಷ ನಾಯಕನ ಆಯ್ಕೆಯ ಬಳಿಕ ಮಾತನಾಡಿದ ಅವರು,ಲೋಕಸಭಾ ಚುನಾವಣೆಯಲ್ಲಿ ಹೈ ಕಮಾಂಡ್ 28 ಸ್ಥಾನ ಗೆಲ್ಲುವ ಗುರಿಯನ್ನು ಕೊಟ್ಟಿದೆ.ಅದರಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವುದೇ ನಮ್ಮ ಮೊದಲ ಗುರಿ ಎಂದಿದ್ದಾರೆ.

ಮುಖ್ಯಮಂತ್ರಿ ಮತ್ತವರ ಮಗ ಇಬ್ಬರೂ ಕೂಡ ವರ್ಗಾವಣೆ ದಂದೆಯಲ್ಲಿ ಮುಳುಗಿದ್ದಾರೆ.ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಆರೋಪ ಮಾಡಿದ್ದಾರೆ.

ರಾಜ್ಯದಲ್ಲಿ ನಮ್ಮ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ರೈತರಿಗೆ ಹೆಚ್ಚಿನ ಬರ ಪರಿಹಾರ ನೀಡಿದ್ದೇವೆ.ಆದರೆ ಈಗಿರುವ ಸರ್ಕಾರ ಕೇಂದ್ರದತ್ತ ಬೆರಳು ಮಾಡುತ್ತಿದೆ.ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲ, ಈಗಾಗಲೇ ಸರ್ಕಾರದ ಖಜಾನೆ ಖಾಲಿಯಾಗಿದೆ.ರೈತರಿಗೆ ಬರ ಪರಿಹಾರದ ಹಣ ನೀಡಲು ಆಗುತ್ತಿಲ್ಲ,ಆದರೆ ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಬಾರಿ ಪೈಪೋಟಿ ನಡೆಯುತ್ತಿದೆ ಎಂದಿದ್ದಾರೆ.

ಬಿಜೆಪಿ ಶಾಸಕರಿಗೆ ನೀಡುವ ಅನುದಾನವನ್ನು ಕಡಿತಗೋಳಿಸಿದ್ದಾರೆ, ಯಾವುದೇ ಕೆಲಸಗಳು ಆಗುತ್ತಿಲ್ಲ ಎಂದು ಸ್ವತಃ ಕಾಂಗ್ರೆಸ್ ಪಕ್ಷದ ಶಾಸಕರೇ ಅಳಲು ತೋಡಿಕೊಂಡಿದ್ದಾರೆ.ನಾವು ಯಾರ ಬಗ್ಗೆಯೂ ದ್ವೇಷ ಪಡುವುದಿಲ್ಲ,ಎಲ್ಲರ ವಿಶ್ವಾಸ ಮತ್ತು ಸಹಕಾರದೊಂದಿಗೆ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸೇರಿ ರಾಜ್ಯ ಸರ್ಕಾರದ ವಿರುದ್ಧ ಹೋರಾಡುತ್ತೇವೆ.ಪ್ರಭಲ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ.ಇಂದಿರಾ ಗಾಂಧಿ ದುರಾಡಳಿತ ಮತ್ತು ತುರ್ತು ಪರಿಸ್ಥಿತಿಯ ವೇಳೆಯಲ್ಲಿ ಸೆರೆಮನೆವಾಸ ಅನುಭವಿಸುತ್ತಿದ್ದೆ ಎಂದಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದು ಕಿ.ಮೀ ಕೂಡ ರಸ್ತೆ ಮಾಡಿಲ್ಲ, ಒಂದು ಶಾಲೆಯನ್ನೂ ಸಹ ನಿರ್ಮಾಣ ಮಾಡಿಲ್ಲ.ಸರ್ಕಾರ ಬದುಕಿದೆಯೋ ಸತ್ತಿದೆಯೋ ತಿಳಿಯುತ್ತಿಲ್ಲ ಎಂದು ಆಡಳಿತ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ