ಮೈಸೂರು: ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಜನ ತೀರ್ಮಾನ ಮಾಡಿದ್ದು, ಈ ಬಾರಿ ಕಾಂಗ್ರೆಸ್ ೧೩೦ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ, ಜಾ.ದಳದವರಷ್ಟೇ ಅಲ್ಲ ಯಾರು ಏನೇ ಹೇಳಲಿ ರಾಜ್ಯದ ಜನ ಬದಲಾವಣೆ ಬಯಸಿದ್ದಾರೆ. ನಾವು ಈಗಾಗಲೇ ಸುಮಾರು 8 ರಿಂದ 9 ಜಿಲ್ಲೆಗಳಲ್ಲಿ ಯಾತ್ರೆ ಮಾಡಿದ್ದೇವೆ, 28ರವರೆಗೆ ಯಾತ್ರೆ ಮಾಡಿ ಸುಮಾರು 22 ಜಿಲ್ಲೆಗಳಿಗೆ ಹೋಗುತ್ತೇವೆ. ಕಾಂಗ್ರೆಸ್ ಯಾತ್ರೆಗೆ ಜನರ ಪ್ರತಿಕ್ರಿಯೆ ಚೆನ್ನಾಗಿದ್ದು, ಒಲವು ನಮ್ಮ ಕಡೆಗಿದೆ. ಹಾಗಾಗಿ ಕನಿಷ್ಠ 130 ಸ್ಥಾನಗಳಲ್ಲಿ ನಾವು ಗೆಲ್ಲುತ್ತೇವೆ ಎಂದರು.