ಚಾಮರಾಜನಗರ : ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು, ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಪೋಸ್ಟರ್ ವಾರ್ಮುಂದುವರೆದಿದೆ.
ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನು ನಿಂದಿಸಿರುವ ಹಾಗೆ ಪೋಸ್ಟರ್ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಪೋಸ್ಟ್ರ್ನಲ್ಲಿ ‘ಶ್ರೀನಿವಾಸ್ ಪ್ರಸಾದ್ ಅರೆ ಹುಚ್ಚ, ರಾಜಕೀಯ ಬಿಟ್ಟು ಮನೆಯಲ್ಲಿರಲಿ ಎಂದು ಬರೆಯಲಾಗಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಹಿನ್ನಲೆ ಪ್ರಸಾದ್ ವಿರುದ್ಧ ಕಾಂಗ್ರೆಸ್ನ ಬಾಲರಾಜ್ ಅವರು ಪೋಸ್ಟರ್ ಹಾಕಿದ್ದಾರೆಂಬ ಆರೋಪ ಕೇಳಿಬಂದಿದ್ದು, ಪೋಸ್ಟ್ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚಾಮರಾಜನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಬಿಜೆಪಿ ದೂರು ನೀಡಿದೆ.
ಮುಗಿಯದ ಪೋಸ್ಟರ್ ವಾರ್ : ನಾಮಪತ್ರ ಸಲ್ಲಿಕೆ ದಿನ ಚಾಮರಾಜನಗರದ ಗಲ್ಲಿ ಗಲ್ಲಿಯಲ್ಲಿ ಮರಳು ಮಾಫಿಯಾದ ಅನಭಿಷಿಕ್ತ ದೊರೆ ಸುನೀಲ್ ಬೋಸ್, ಗೋ ಬ್ಯಾಕ್ ಎಂಬ ಪೋಸ್ಟರ್ ಅಂಟಿಸಲಾಗಿತ್ತು. ಇದೀಗ ಶ್ರೀನಿವಾಸ್ ಪ್ರಸಾದ್ ಅವರ ಬಗ್ಗೆ ಪೋಸ್ಟ್ ಹರಿದಾಡುತ್ತಿದ್ದು ಸಧ್ಯಕ್ಕೆ ಪೊಸ್ಟರ್ ವಾರ್ ಮುಗಿಯುವ ಹಾಗೆ ಕಾಣುತ್ತಿಲ್ಲ.





