ಚಾಮರಾಜನಗರ : ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು, ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಪೋಸ್ಟರ್ ವಾರ್ಮುಂದುವರೆದಿದೆ.
ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನು ನಿಂದಿಸಿರುವ ಹಾಗೆ ಪೋಸ್ಟರ್ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಪೋಸ್ಟ್ರ್ನಲ್ಲಿ ‘ಶ್ರೀನಿವಾಸ್ ಪ್ರಸಾದ್ ಅರೆ ಹುಚ್ಚ, ರಾಜಕೀಯ ಬಿಟ್ಟು ಮನೆಯಲ್ಲಿರಲಿ ಎಂದು ಬರೆಯಲಾಗಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಹಿನ್ನಲೆ ಪ್ರಸಾದ್ ವಿರುದ್ಧ ಕಾಂಗ್ರೆಸ್ನ ಬಾಲರಾಜ್ ಅವರು ಪೋಸ್ಟರ್ ಹಾಕಿದ್ದಾರೆಂಬ ಆರೋಪ ಕೇಳಿಬಂದಿದ್ದು, ಪೋಸ್ಟ್ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚಾಮರಾಜನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಬಿಜೆಪಿ ದೂರು ನೀಡಿದೆ.
ಮುಗಿಯದ ಪೋಸ್ಟರ್ ವಾರ್ : ನಾಮಪತ್ರ ಸಲ್ಲಿಕೆ ದಿನ ಚಾಮರಾಜನಗರದ ಗಲ್ಲಿ ಗಲ್ಲಿಯಲ್ಲಿ ಮರಳು ಮಾಫಿಯಾದ ಅನಭಿಷಿಕ್ತ ದೊರೆ ಸುನೀಲ್ ಬೋಸ್, ಗೋ ಬ್ಯಾಕ್ ಎಂಬ ಪೋಸ್ಟರ್ ಅಂಟಿಸಲಾಗಿತ್ತು. ಇದೀಗ ಶ್ರೀನಿವಾಸ್ ಪ್ರಸಾದ್ ಅವರ ಬಗ್ಗೆ ಪೋಸ್ಟ್ ಹರಿದಾಡುತ್ತಿದ್ದು ಸಧ್ಯಕ್ಕೆ ಪೊಸ್ಟರ್ ವಾರ್ ಮುಗಿಯುವ ಹಾಗೆ ಕಾಣುತ್ತಿಲ್ಲ.
ಮೈಸೂರು : ಸಾಂಸ್ಕೃತಿಕ ನಾಯಕರನ್ನು ಜಾತಿಯಿಂದ ಬಿಡುಗಡೆಗೊಳಿಸಿದರೆ ಅವರ ಶಕ್ತಿ ವೃದ್ಧಿಸುತ್ತದೆ ಎಂದು ಖ್ಯಾತ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಹೇಳಿದರು.…
ಮೈಸೂರು: ಉತ್ತರ ಪ್ರದೇಶದ ವಾರಣಾಸಿಯಲ್ಲಿ 19 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಿರುವುದನ್ನು ಖಂಡಿಸಿ ಗಂಧದಗುಡಿ ಫೌಂಡೇಶನ್‌ನ ಅಧ್ಯಕ್ಷ ಆರ್ಯನ್…
ಹೊಸದಿಲ್ಲಿ: ಮುಂಬೈ ದಾಳಿಯ ಸಂಚುಕೋರ ತಹವ್ವೂರ್ ರಾಣಾ ಹಸ್ತಾಂತರ ಯಶಸ್ವಿಯಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಿಳಿಸಿದೆ. 26/11ರ…
ಮೈಸೂರು : ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಚದುರಿದಂತೆ ಅಲ್ಲಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಮೈಸೂರು,…
ಬೆಂಗಳೂರು : ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ಎಡಿಎಲ್‌ಆರ್‌ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ…
ಬೆಂಗಳೂರು: ಕಾಂಗ್ರೆಸ್ ಶಾಸಕ ಬಸವರಾಜ್ ರಾಯರೆಡ್ಡಿ ಅವರ ಹೇಳಿಕೆ ರಾಜ್ಯ ಸರ್ಕಾರದ ಆಡಳಿತ ವೈಖರಿಗೆ ಹಿಡಿದ ಕನ್ನಡಿ ಎಂದು ವಿರೋಧ…