ಬೆಳಗಾವಿ : ರಮೇಶ್ ಜಾರಕಿಹೊಳಿ ಆಪ್ತ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕರಣ ರಾಜಕೀಯ ಪ್ರೇರಿತವೋ ಅಥವಾ ಶಡ್ಯಂತ್ರವೋ ಗೊತ್ತಾಗಬೇಕು. ಆತ ಮೋಸ್ಟ್ ಬೋಗಸ್ ಎಂದಿದ್ದಾರೆ.
ನಮ್ಮ ಕುಟುಂಬದವರೆಲ್ಲರೂ ಶಾಂತಿ ಪ್ರಿಯರು. ಎಸ್ ಪಿ ಜೊತೆ ಮಾತನಾಡಿದ್ದೇನೆ. ಚಾಕು ಇರಿತದ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಬೇಕಿದೆ. ಆತ ಯಾರ ಆಪ್ತ ಎನ್ನುವುದಕ್ಕಿಂತ ನಮ್ಮ ಹೆಸರು ಬಂದಿದೆ ಈ ಬಗ್ಗೆ ವಿಚಾರ ಮಾಡಿದ್ದೇನೆ. ಪೃಥ್ವಿ ಸಿಂಗ್ ನನ್ನೇ ವಿಚಾರಣೆ ಮಾಡಬೇಕು. ಆತನ ಹೆಸರು ಬರೆದಿಟ್ಟು ಹುಡುಗರು ಆತ್ಮಹತ್ಯೆ ಮಾಡಿಕೊಂಡಿದ್ದರು 24 ಗಂಟೆಯೊಳಗೆ ಪ್ರಕರಣದ ಸತ್ಯಾಸತ್ಯತೆ ಗೊತ್ತಾಗಬೇಕು ಎಂದಿದ್ದಾರೆ.
ನೆನ್ನೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಬೆಳಗಾವಿಯ ಜಯನಗರದ ನಿವಾಸದ ಬಳಿ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿತ್ತು.ಇದರಿಂದ ಪೃಥ್ವಿ ಸಿಂಗ್ ಕೈ ಮತ್ತು ಬೆನ್ನಿಗೆ ಗಾಯಗಳಾಗಿದ್ದವು
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋತರ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಆಪ್ತರಾದ ಸುಜಯ್ ಮತ್ತು ಚನ್ನರಾಜ ಅವರ ಬಾಡಿಗಾರ್ಡ್ ಪೃಥ್ವಿ ಸಿಂಗ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಪೃಥ್ವಿ ಸಿಂಗ್ ಜೊತೆ ಚನ್ನರಾಜ ಹಟ್ಟಿಹೊಳಿ ಆಪ್ತರು ಮಾತನಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…