ರಾಜಕೀಯ

ಇಂದು ರಾಹುಲ್‌ಗಾಂಧಿ ನಾಮಪತ್ರ ಸಲ್ಲಿಕೆ !

ವಯನಾಡ್ : ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಸಂಸದ ಹಾಗೂ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಏಪ್ರಿಲ್ 3ರ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಇದಕ್ಕೂ ಮುನ್ನ ರಾಹುಲ್ ಗಾಂಧಿ ಈ ಪ್ರದೇಶದಲ್ಲಿ ರೋಡ್ ಶೋ ನಡೆಸಲಿದ್ದಾರೆ. ವಿಶೇಷವೆಂದರೆ, ಕಳೆದ ಚುನಾವಣೆಯಲ್ಲಿ ರಾಹುಲ್ ಗಾಂಧಿ ಸುಮಾರು 5 ಲಕ್ಷ ಮತಗಳ ಅಂತರದಿಂದ ದೊಡ್ಡ ಗೆಲುವು ಸಾಧಿಸಿದ್ದರು.

ಈ ಬಾರಿ ವಯನಾಡ್ ರಾಹುಲ್ ಗಾಂಧಿಗೆ ಸುಲಭವಲ್ಲ. ಈ ಚುನಾವಣೆಯಲ್ಲಿ ರಾಹುಲ್ ವಿರುದ್ಧ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಅವರ ಪತ್ನಿ ಅನ್ನಿ ರಾಜಾ ಇದ್ದಾರೆ. ಪಕ್ಷವು ಅವರನ್ನು ವಯನಾಡ್ ನಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಬಿಜೆಪಿಯಿಂದ ರಾಹುಲ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಕಣಕ್ಕಿಳಿಯಲಿದ್ದಾರೆ. ಈ ಮೂವರು ಪ್ರಬಲ ನಾಯಕರಾಗಿದ್ದು, ಈ ಕ್ಷೇತ್ರದಲ್ಲಿ ಕಠಿಣ ಸ್ಪರ್ಧೆ ನಡೆಯಲಿದೆ ಎಂದು ನಂಬಲಾಗಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

2 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

3 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

4 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

4 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

4 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

4 hours ago