ಬೆಂಗಳೂರು : ನಿಮಗೆ ಮುಸ್ಲಿಮರ ಮೇಲೆ ಅಷ್ಟೊಂದು ಪ್ರೀತಿ, ಕಾಳಜಿ ಇದ್ದರೆ ನಿಮ್ಮ ಆಸ್ತಿ ಮಾರಿ ಅವರಿಗೆ ಹಣ ಕೊಡಿ ಅಂತ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.
ಅಲ್ಪಸಂಖ್ಯಾತರಿಗೆ ಸರ್ಕಾರ 10 ಸಾವಿರ ಕೋಟಿ ರೂ. ಘೋಷಣೆ ಮಾಡಿರುವುದರ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ಮೇಲೆ ಬಹಳಷ್ಟು ಗೌರವ ಇದೆ. ಮುಖ್ಯಮಂತ್ರಿ ಆದವರು ಎಲ್ಲಾ ಧರ್ಮದವರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು. ಆದರೆ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಮೇಲೆ ವಿಶೇಷವಾದ ಒಲವನ್ನು ಹೊಂದಿದ್ದಾರೆ. ನಮಗೆ ಸಂಘರ್ಷದ ಅವಶ್ಯಕತೆ ಇಲ್ಲ. ಆದರೆ ಮುಖಯಮಂತ್ರಿಗಳು ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತಿದ್ದಾರೆ ಎಂದಿದ್ದಾರೆ.
ಸಿದ್ದರಾಮಯ್ಯನವರು ನಾನು ಕುಂಕುಮ ಹಚ್ಚಲ್ಲ, ಕೇಸರಿ ಪೇಟ ಹಾಕಲ್ಲ ಅಂತ ಹೇಳ್ತಾರೆ. ನಿಮಗೆ ಮುಸ್ಲಿಮರ ಮೇಲೆ ಅಷ್ಟೊಂದು ಪ್ರೀತಿ ಇದ್ರೆ ನಿಮ್ಮ ಆಸ್ತಿ ಮಾರಿ ಹಣ ಕೊಡಿ. ನೀವೆನು ದೇಶದ ಪ್ರಧಾನ ಮಂತ್ರಿನಾ ? ಇಲ್ಲ ಸರ್ಕಾರ ನಿಮ್ಮ ಆಸ್ತಿನಾ ? ಇಲ್ಲೇನು ಪಾಕಿಸ್ತಾನ ಆಡಳಿತ ಮಾಡುತ್ತಾ ? ಸಿದ್ದರಾಮಯ್ಯ ಅವರ ಪಕ್ಕದಲ್ಲಿ ಭಯೋತ್ಪಾದಕರು ಕುಳಿತುಕೊಳ್ತಾರೆ. ಮೀರ್ ಅವರು ಸಾಬ್ರಿಗೆ ತಲೆಬಾಗಬೇಕು ಅಂತಾರೆ. ಕರ್ನಾಟಕ ಶಾಂತಿ ಸುವ್ಯವಸ್ಥೆಗೆ ಹೆಸರಾಗಿದೆ. ಹೀಗೆ ಮಾಡಿದ್ರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಥನವಾಗುತ್ತೆ. ನೀವು ಮೂರು ರಾಜ್ಯದಲ್ಲಿ ಮಾತ್ರ ಅಧಿಕಾರದಲ್ಲಿ ಇದ್ದೀರ. ಹೀಗೆ ಮಾಡಿದರೆ ಮುಂಬರುವ ಲೋಕಸಭಾ ಚುನಾವಣೆಯ ವೇಳೆ ಜನ ಮತ್ತೆ ನಿಮ್ಮನ್ನು ತಿರಸ್ಕರಿಸುತ್ತಾರೆ ಎಂದು ಕಿಡಿ ಕಾರಿದ್ದಾರೆ.
ಅಷ್ಟೇ ಅಲ್ಲದೆ ಸಿದ್ದರಾಮಯ್ಯ ಅವರು ರಾಜ್ಯದ ಜನರ ಬಳಿ ಕ್ಷಮೆ ಕೇಳಬೇಕು. ತಕ್ಷಣವೇ ತಮ್ಮ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…