ಚಿಕ್ಕಮಗಳೂರು : ಡಿಕೆಶಿ ಮಹಿಳೆಯನ್ನು ಅಪಹರಿಸಿ ಬೆದರಿಸಿ ಜಮೀನು ಬರೆಸಿಕೊಂಡಿದ್ದು ನಿಜ. ಆ ಘಟನೆ ನಡೆದದ್ದು 1996-97 ರಲ್ಲಿ, ಅದರ ದಾಖಲೆಗಳಿವೆ ಎಂದು ನಿನ್ನೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಡಿ ಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದರು. ಇದೀಗ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಕೂಡ ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದು,9 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿ, ಕೂಡಿ ಹಾಕಿ ಆಸ್ತಿ ಬರೆಸಿಕೊಂಡಿದ್ದಾರೆ.ನನ್ನ ಬಳಿ ಎಲ್ಲಾ ದಾಖಲೆಗಳಿವೆ ಎಂದು ಗಂಭಿರ ಆರೋಪ ಮಾಡಿದರು.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ದೇವೇಗೌಡರು ಡಿಸೈನ್ ಡಿಕೆ ಶಿವಕುಮಾರ್ ವಿರುದ್ಧ ಈ ರೀತಿ ಗಂಭೀರ ಆರೋಪ ಮಾಡಿದರು. 9 ವರ್ಷದ ಬಾಲಕಿಯನ್ನ ಕರೆದೋಯ್ದು ಆಸ್ತಿ ಬರೆಸಿಕೊಂಡಿದ್ದಾರೆ.ನನ್ನ ಬಳಿ ಎಲ್ಲಾ ದಾಖಲೆಗಳಿವೆ.ಸುಪ್ರೀಂ ಕೋರ್ಟ್ ನಲ್ಲಿ ಡಿಕೆ ಶಿವಕುಮಾರ್ ಗೆ ಮುಖಭಂಗವಾಗುತ್ತದೆ. ಅಮೇರಿಕಾದಿಂದ ಹಣ ತಂದಿದ್ದ ವ್ಯಕ್ತಿಗೆ ಆಸ್ತಿ ಬರೆಸಿದರು ಎಂದು ಗಂಭಿರ ಆರೋಪ ಮಾಡಿದರು.
ಅವರು ಐಟಿ ಕಂಪನಿ ಸ್ಥಾಪನೆ ಮಾಡಲು ಹೊರಟಿದ್ದರು.ಅದರ ಹಿಂದಿನ ದಿನ ಸ್ಟಾಪ್ ಪೇಪರ್ ತಂದು ನಕಲಿ ಕ್ರಯ ಮಾಡಿದರು. 9 ವರ್ಷದ ಬಾಲಕಿ ಕೂಡಿಹಾಕಿ ಆಸ್ತಿಯನ್ನು ಬರೆಸಿಕೊಂಡರು.ಬಾಲಕಿಯನ್ನ ಗಂಗಯ್ಯ ತಿಮ್ಮಯ್ಯ ಎಂಬುವರ ಮನೆ ಪಕ್ಕದಲ್ಲಿಟ್ಟಿದ್ದರು.ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿ 9 ದಿನ ಕೂಡಿ ಹಾಕಿದ್ದರು.ನಿನ್ನ ಮಗಳು ಬೇಕು ಎಂದರೆ ಆಸ್ತಿ ಬರೆದುಕೊಡು ಬಾಲಕಿ ತಾಯಿಯನ್ನು ಬೆದರಿಸಿ ಆಸ್ತಿ ಬರೆಸಿಕೊಂಡಿದ್ದರು.ಎಲ್ಲಾ ದಾಖಲೆಗಳು ನನ್ನ ಬಳಿ ಇವೆ ಡಿಕೆ ಶಿವಕುಮಾರ್ ವಿರುದ್ಧ ಎಚ್ಡಿ ದೇವೇಗೌಡ ಇದೀಗ ಗಂಭೀರ ಆರೋಪ ಮಾಡಿದ್ದಾರೆ.
ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…
ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…
ಡಿಎಚ್‌ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…
ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು…
ಡಾ.ಎಂ.ಡಿ.ಉಮೇಶ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪತ್ನಿ ಕಸ್ತೂರ ಬಾ ಅವರು ಏ. ೧೧, ೧೮೬೯ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಗೋಕುಲ್‌ದಾಸ್ ಕಪಾಡಿಯಾ…
ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್ʻ…