ಬೆಂಗಳೂರು : ವಿರೋಧಿಗಳಿಗೆ ಶಕ್ತಿ ಯೋಜನೆ ಯಶಸ್ಸು ತಕ್ಕ ಉತ್ತರ ನೀಡಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಯೋಜನೆಯ ಕುರಿತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಡಿಕೆ ಶಿವಕುಮಾರ್, ಶಕ್ತಿ ಯೋಜನೆಯಡಿಯಲ್ಲಿ ಈವರೆಗೆ 100.47 ಕೋಟಿ ಮಹಿಳೆಯರು ಪ್ರಯಾಣ ಮಾಡಿ ಯೋಜನೆಯನ್ನು ಯಶಸ್ವಿಗೊಳಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಶಕ್ತಿ ಯೋಜನೆಯನ್ನು ವಿರೋಧಿಸಿದ್ದ ಸಿಕ್ಕಿದೆ ಎಂದು ಹೇಳಿದ್ದಾರೆ.
ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ ಶತಕೋಟಿ ದಾಟಿರುವುದು ಪ್ರಶಂಸನೀಯ. ಯೋಜನೆ ಆರಂಭವಾದಾಗಿನಿಂದ ಈವರೆಗೆ 100.47 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಈ ಬಗ್ಗೆ ನಮ್ಮ ಬಳಿ ದಾಖಲೆಗಳಿವೆ. ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿರುವುದು ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ.
ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರತಿಪಕ್ಷಗಳು ಆರೋಪ ಮಾಡಿದ್ದವು ಆದರೆ ಅದೆಲ್ಲದಕ್ಕೂ ಶಕ್ತಿ ಯೋಜನೆ ತಕ್ಕ ಉತ್ತರ ನೀಡಿದೆ. ದುಡಿಯುವ ವರ್ಗದ ಮಹಿಳೆಯರಿಗೆ ಇದು ಹೆಚ್ಚು ಸಹಕಾರಿಯದ ಯೋಜನೆ ಎಂಬುದನ್ನು ತೋರಿಸಿಕೊಟ್ಟಿದೆ ಎಂದಿದ್ದಾರೆ.
ಶಕ್ತಿ ಯೋಜನೆ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಗಳಲ್ಲಿ ಒಂದಾಗಿದೆ. ಇದು ದುಡಿಯುವ ಹಾಗೂ ಬಡವರ್ಗದ ಮಹಿಳೆಯರಿಗೆ ಸಹಕಾರಿಯಾಗಿದೆ. ಶಕ್ತಿ ಯೋಜನೆ ಜಾರಿಯಾದಗಿನಿಂದ ಕೆಎಸ್ ಆರ್ ಟಿ ಸಿ ಬಸ್ ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಈ ಯೋಜನೆ ಜನಪರ ಮೆಚ್ಚುಗೆ ವ್ಯಕ್ತವಾದ ಯೋಜನೆ ಎಂಬ ಹೆಗ್ಗಳಿಕೆ ಹೊಂದಿದೆ. ಇನ್ನು ಈ ಯೋಜನೆ ಅಡಿಯಲ್ಲಿ ಮಹಿಳೆಯರು ಅತಿ ಹೆಚ್ಚಾಗಿ ತೀರ್ಥಕ್ಷೇತ್ರಗಳಿಗೆ ಪ್ರಯಾಣ ಮಾಡಿದ್ದಾರೆ ಎಂದು ವರದಿಗಳು ಹೇಳಿವೆ.
ಪ್ರತಿಪಕ್ಷಗಳು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ತೀವ್ರವಾಗಿ ಟೀಕಿಸಿದ್ದವು. ರಾಜ್ಯ ಕಾಂಗ್ರೆಸ್ ಸರ್ಕಾರದ ಬಿಟ್ಟಿ ಭಾಗ್ಯಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಕಿಡಿ ಕಾರಿದ್ದವು.
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…
ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…