ಬೆಂಗಳೂರು – ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆದಿರುವ ಪ್ರಕರಣದಲ್ಲಿ ಬಿಜೆಪಿಯ ಕೈವಾಡ ಇರಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಿರುವುದರ ಹಿಂದೆ ಬಿಜೆಪಿಯದೇ ಕೈವಾಡ ಇರಬಹುದು. ಈ ಬಗ್ಗೆ ಯಡಿಯೂರಪ್ಪ ಅವರು ಬಂಜಾರ ಸಮುದಾಯದ ಜನ ತಪ್ಪು ಗ್ರಹಿಕೆಯಿಂದ ಕಲ್ಲು ತೂರಾಟ ಮಾಡಿದ್ದಾರೆ ಎಂದಿದ್ದಾರೆ, ಆದರೆ ಒಳಮೀಸಲಾತಿಯನ್ನು ಬಂಜಾರ ಸಮುದಾಯ ಮೊದಲಿಂದಲೂ ವಿರೋಧ ಮಾಡಿಕೊಂಡು ಬಂದಿದೆ, ಈ ಉದ್ದೇಶಕ್ಕೆ ಈಗ ವಿರೋಧ ಮಾಡಿರಬಹುದು ಎಂದು ಹೇಳಿದ್ದಾರೆ.
ಮಾಡಾಳ್ ವಿರೂಪಾಕ್ಷಪ್ಪ ಬಂಧನ ಮೊದಲ ದಿನವೇ ಆಗಬೇಕಿತ್ತು, ತಡವಾಗಿ ಆಗಿದೆ. ಕಾನೂನು ರೀತಿಯ ನಿರ್ಣಯದಂತೆ ಆಗಿದೆ. ರೆಡ್ ಹ್ಯಾಂಡ್ ಆಗಿ ಅವರ ಮಗ ಸಿಕ್ಕಿಬಿದ್ದಿರುವುದರಿಂದ ಈ ಪ್ರಕರಣದಲ್ಲಿ ವಿರೂಪಾಕ್ಷಪ್ಪ ಬಂಧನ ಸರಿಯಾಗಿದೆ ಎಂದಿದ್ದಾರೆ.
2018ರ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿತ್ತು ಎಂದು ಸಿ.ಪಿ ಯೋಗೀಶ್ವರ್ ಸತ್ಯ ಹೇಳಿದ್ದಾರೆ ಅವರಿಗೆ ಧನ್ಯವಾದ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.