Mysore
26
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಪ್ರಧಾನಿಯ ಗಾಢ ನಿದ್ರೆ, ರಾಜ್ಯದ ಅಭಿವೃದ್ಧಿಗೆ ಅದೇ ತೊಂದ್ರೆ: ಸಿದ್ದರಾಮಯ್ಯ

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಹಣ ನೀಡುತ್ತಿಲ್ಲ ಎಂಬ ವಿಷಯವನ್ನು ಸಿಎಂ ಸಿದ್ದರಾಮಯ್ಯ ಈಗಾಗಲೇ ಸಾಕಷ್ಟು ಬಾರಿ ಹೇಳಿಕೊಂಡಿದ್ದಾರೆ. ಇದೀಗ ತಮ್ಮ ಎಕ್ಸ್‌ ಖಾತೆಯಲ್ಲಿ ನರೇಂದ್ರ ಮೋದಿ ಅವರ ವ್ಯಂಗ್ಯ ಚಿತ್ರಗಳನ್ನೊಳಗೊಂಡ ಮೀಮ್ಸ್‌ ಹಂಚಿಕೊಂಡಿರುವ ಸಿದ್ದರಾಮಯ್ಯ ಪ್ರಧಾನಿಯ ಗಾಢ ನಿದ್ರೆಯೇ ರಾಜ್ಯದ ಅಭಿವೃದ್ಧಿಗೆ ತೊಂದ್ರೆ ಎಂದು ಬರೆದುಕೊಂಡಿದ್ದಾರೆ.

 

ತನಗೆ ಪ್ರಚಾರ ಕೊಟ್ಟುಕೊಳ್ಳಲು ಹಾಗೂ ಬಿಜೆಪಿಗೆ ಪ್ರಚಾರ ಮಾಡಲು ಸದಾ ಎದ್ದಿರುವ ಮೋದಿ ರಾಜ್ಯದ ಸಮಸ್ಯೆಗಳ ವಿಚಾರದಲ್ಲಿ ಮಾತ್ರ ಯಾವಾಗಲೂ ತೂಕಡಿಸುತ್ತಿರುತ್ತಾರೆ ಎಂದು ಕಾಲೆಳೆದಿರುವ ಸಿದ್ದರಾಮಯ್ಯ ಕರ್ನಾಟಕದಿಂದ ಆಯ್ಕೆಯಾದ ಬಿಜೆಪಿ ಸಂಸದರು ಬಾಯಿಗೆ ಬೀಗ ಹಾಕಿಕೊಂಡು ಸದಾ ಮೋದಿ ಜಪ ಮಾಡುತ್ತಿರುತ್ತಾರೆ ಎಂದು ಟೀಕಿಸಿದ್ದಾರೆ.

 

ಸಿದ್ದರಾಮಯ್ಯ ಟ್ವೀಟ್‌ ಈ ಕೆಳಕಂಡಂತಿದೆ..

 

ಪ್ರಧಾನಿಯ ಗಾಢ ನಿದ್ರೆ

ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ

 

ತನಗೆ ತಾನೇ ಪ್ರಚಾರ ಕೊಟ್ಟುಕೊಳ್ಳಲು ಹಾಗೂ ಬಿಜೆಪಿಗಾಗಿ ಪ್ರಚಾರ ಮಾಡಲು ಸದಾ ಎದ್ದಿರುವ ನರೇಂದ್ರ ಮೋದಿ ಅವರು ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಯಾವಾಗಲೂ ತೂಕಡಿಸುತ್ತಿರುತ್ತಾರೆ.

 

ಕರ್ನಾಟಕದ ಕಟು ವಾಸ್ತವಕ್ಕೆ ಸ್ಪಂದಿಸದ ಮೋದಿಯಿಂದ ಸದಾ ಪಲಾಯನ

– ಕೇಂದ್ರವು ಸರಿಯಾಗಿ ಅನುದಾನ ಕೊಡುತ್ತಿಲ್ಲ

– ಕನ್ನಡಿಗರ ಮಹತ್ವಾಕಾಂಕ್ಷೆಗಳಿಗೆ ಕಿಂಚಿತ್ತು ಬೆಲೆ ನೀಡುತ್ತಿಲ್ಲ

– ಕೇಂದ್ರದ ಪರಿಹಾರ ಹಣ ಇನ್ನೂ ರೈತರ ಕೈಗೆ ತಲುಪಿಲ್ಲ…

 

ಮೋದಿ ಮಂತ್ರವಿಷ್ಟೇ

ಕಡೆಗಣಿಸು. ನಿರ್ಲಕ್ಷಿಸು. ನಿದ್ರಿಸು. ಮತ್ತದನ್ನೇ ಪುನರಾವರ್ತಿಸು!

 

ಇನ್ನು ಬಿಜೆಪಿ ಸಂಸದರ ಮಂತ್ರ

ಬಾಯಿಗೆ ಬೀಗ ಹಾಕಿಕೊಂಡಿರು. ಮೋದಿಯದ್ದೇ ಜಪ ಮಾಡಿಕೊಂಡಿರು. ಕನ್ನಡಿಗರ ನಂಬಿಕೆಗೆ ದ್ರೋಹ ಬಗೆಯುತ್ತಿರು. ಮೋದಿ ನಿಶ್ಚಿಂತೆಯಿಂದ ನಿದ್ರಿಸಲು ಮತ್ತದನ್ನೇ ಪುನರಾವರ್ತಿಸು!

 

ಎದ್ದೇಳಿ, ಪ್ರಧಾನಮಂತ್ರಿಯವರೇ!

ಕರ್ನಾಟಕದ ನ್ಯಾಯಯುತ ಪಾಲನ್ನು ಕೊಡಬೇಕಾದ ಸಮಯವಿದು

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!