ರಾಜಕೀಯ

ಪ್ರಧಾನಿಯ ಗಾಢ ನಿದ್ರೆ, ರಾಜ್ಯದ ಅಭಿವೃದ್ಧಿಗೆ ಅದೇ ತೊಂದ್ರೆ: ಸಿದ್ದರಾಮಯ್ಯ

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಹಣ ನೀಡುತ್ತಿಲ್ಲ ಎಂಬ ವಿಷಯವನ್ನು ಸಿಎಂ ಸಿದ್ದರಾಮಯ್ಯ ಈಗಾಗಲೇ ಸಾಕಷ್ಟು ಬಾರಿ ಹೇಳಿಕೊಂಡಿದ್ದಾರೆ. ಇದೀಗ ತಮ್ಮ ಎಕ್ಸ್‌ ಖಾತೆಯಲ್ಲಿ ನರೇಂದ್ರ ಮೋದಿ ಅವರ ವ್ಯಂಗ್ಯ ಚಿತ್ರಗಳನ್ನೊಳಗೊಂಡ ಮೀಮ್ಸ್‌ ಹಂಚಿಕೊಂಡಿರುವ ಸಿದ್ದರಾಮಯ್ಯ ಪ್ರಧಾನಿಯ ಗಾಢ ನಿದ್ರೆಯೇ ರಾಜ್ಯದ ಅಭಿವೃದ್ಧಿಗೆ ತೊಂದ್ರೆ ಎಂದು ಬರೆದುಕೊಂಡಿದ್ದಾರೆ.

 

ತನಗೆ ಪ್ರಚಾರ ಕೊಟ್ಟುಕೊಳ್ಳಲು ಹಾಗೂ ಬಿಜೆಪಿಗೆ ಪ್ರಚಾರ ಮಾಡಲು ಸದಾ ಎದ್ದಿರುವ ಮೋದಿ ರಾಜ್ಯದ ಸಮಸ್ಯೆಗಳ ವಿಚಾರದಲ್ಲಿ ಮಾತ್ರ ಯಾವಾಗಲೂ ತೂಕಡಿಸುತ್ತಿರುತ್ತಾರೆ ಎಂದು ಕಾಲೆಳೆದಿರುವ ಸಿದ್ದರಾಮಯ್ಯ ಕರ್ನಾಟಕದಿಂದ ಆಯ್ಕೆಯಾದ ಬಿಜೆಪಿ ಸಂಸದರು ಬಾಯಿಗೆ ಬೀಗ ಹಾಕಿಕೊಂಡು ಸದಾ ಮೋದಿ ಜಪ ಮಾಡುತ್ತಿರುತ್ತಾರೆ ಎಂದು ಟೀಕಿಸಿದ್ದಾರೆ.

 

ಸಿದ್ದರಾಮಯ್ಯ ಟ್ವೀಟ್‌ ಈ ಕೆಳಕಂಡಂತಿದೆ..

 

ಪ್ರಧಾನಿಯ ಗಾಢ ನಿದ್ರೆ

ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ

 

ತನಗೆ ತಾನೇ ಪ್ರಚಾರ ಕೊಟ್ಟುಕೊಳ್ಳಲು ಹಾಗೂ ಬಿಜೆಪಿಗಾಗಿ ಪ್ರಚಾರ ಮಾಡಲು ಸದಾ ಎದ್ದಿರುವ ನರೇಂದ್ರ ಮೋದಿ ಅವರು ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಯಾವಾಗಲೂ ತೂಕಡಿಸುತ್ತಿರುತ್ತಾರೆ.

 

ಕರ್ನಾಟಕದ ಕಟು ವಾಸ್ತವಕ್ಕೆ ಸ್ಪಂದಿಸದ ಮೋದಿಯಿಂದ ಸದಾ ಪಲಾಯನ

– ಕೇಂದ್ರವು ಸರಿಯಾಗಿ ಅನುದಾನ ಕೊಡುತ್ತಿಲ್ಲ

– ಕನ್ನಡಿಗರ ಮಹತ್ವಾಕಾಂಕ್ಷೆಗಳಿಗೆ ಕಿಂಚಿತ್ತು ಬೆಲೆ ನೀಡುತ್ತಿಲ್ಲ

– ಕೇಂದ್ರದ ಪರಿಹಾರ ಹಣ ಇನ್ನೂ ರೈತರ ಕೈಗೆ ತಲುಪಿಲ್ಲ…

 

ಮೋದಿ ಮಂತ್ರವಿಷ್ಟೇ

ಕಡೆಗಣಿಸು. ನಿರ್ಲಕ್ಷಿಸು. ನಿದ್ರಿಸು. ಮತ್ತದನ್ನೇ ಪುನರಾವರ್ತಿಸು!

 

ಇನ್ನು ಬಿಜೆಪಿ ಸಂಸದರ ಮಂತ್ರ

ಬಾಯಿಗೆ ಬೀಗ ಹಾಕಿಕೊಂಡಿರು. ಮೋದಿಯದ್ದೇ ಜಪ ಮಾಡಿಕೊಂಡಿರು. ಕನ್ನಡಿಗರ ನಂಬಿಕೆಗೆ ದ್ರೋಹ ಬಗೆಯುತ್ತಿರು. ಮೋದಿ ನಿಶ್ಚಿಂತೆಯಿಂದ ನಿದ್ರಿಸಲು ಮತ್ತದನ್ನೇ ಪುನರಾವರ್ತಿಸು!

 

ಎದ್ದೇಳಿ, ಪ್ರಧಾನಮಂತ್ರಿಯವರೇ!

ಕರ್ನಾಟಕದ ನ್ಯಾಯಯುತ ಪಾಲನ್ನು ಕೊಡಬೇಕಾದ ಸಮಯವಿದು

andolana

Recent Posts

ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

5 mins ago

ಪಂಚ ಗ್ಯಾರಂಟಿಯಿಂದ ಅಭಿವೃದ್ಧಿ ಆಗಿದೆಯೇ?: ತಜ್ಞರಿಂದ ಸಮೀಕ್ಷೆಗೆ ವಿಶ್ವನಾಥ್‌ ಒತ್ತಾಯ

ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…

1 hour ago

3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ: ಸಿಎಂಎಸ್‌ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್‌

ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್‌ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬಡಾವಣೆ ಪೊಲೀಸ್‌…

2 hours ago

ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ಹಾಗೂ ದೊಡ್ಡ ಕೈವಾಡ: ಪ್ರಹ್ಲಾದ್‌ ಜೋಶಿ ಆರೋಪ

ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌…

2 hours ago

ಕೋರ್ಟ್‌ ಆದೇಶದ ಬೆನ್ನಲ್ಲೇ ಎಲ್ಲಾ ದೇಶಗಳಿಗೆ ಶೇ.10ರಷ್ಟು ಸುಂಕ ಆದೇಶಕ್ಕೆ ಟ್ರಂಪ್‌ ಸಹಿ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್‌ ರದ್ದುಗೊಳಿಸಿದ…

2 hours ago

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಳ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago