Mysore
27
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

Rajyasabha: ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಸುಧಾ ಮೂರ್ತಿ

ಹೊಸದಿಲ್ಲಿ: ಲೇಖಕಿ, ಸವಾಜ ಸೇವಕಿ,ಇನ್ಛೋಸಿಸ್ ವಾಜಿ ಅಧ್ಯಕ್ಷೆ ಸುಧಾಮೂರ್ತಿ ಅವರು ಗುರುವಾರ ಹೊಸ ದೆಹಲಿಯಲ್ಲಿ ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲಿ ಪ್ರವಾಣ ವಚನ ಸ್ವೀಕರಿಸಿದರು.

ಮೂಲತಃ ಇಂಜಿನಿಯರ್ ಆಗಿರುವ ಸುಧಾಮೂರ್ತಿ ಅವರು ತಮ್ಮ ಪತಿ ಎನ್.ಆರ್.ನಾರಾಯಣಮೂರ್ತಿ ಅವರ ಸಮ್ಮುಖದಲ್ಲಿ ಪ್ರವಾಣ ವಚನ ಸ್ವೀಕರಿಸಿದರು. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಖರ್ ಅವರು ಸಂಸತ್ ಭವನದ ತಮ್ಮ ಕಚೇರಿಯಲ್ಲಿ ಪ್ರವಾಣ ವಚನ ಬೋಧಿಸಿದರು.

೭೩ ವರ್ಷದ ಸುಧಾ ಮೂರ್ತಿ, ಹಲವು ಪುಸ್ತಕಗಳ ಲೇಖಕರಾಗಿ, ವಿಶೇಷವಾಗಿ ಮಕ್ಕಳ ಪುಸ್ತಕ ಬರೆದು ಜನಪ್ರಿಯರಾಗಿದ್ದಾರೆ. ಇನ್ಛೋಸಿಸ್ ಫೌಂಡೇಶನ್ ಮೂಲಕ ಸಾಮಾಜಿಕ ಕಾರ್ಯಗಳನ್ನು ಕೈಗೊಂಡು ಜನಪ್ರಿಯರಾಗಿದ್ದಾರೆ.

Tags: