ಬೆಂಗಳೂರು: ತಮ್ಮ ವಿರುದ್ಧ ಸುಳ್ಳು ಆರೋಪ ಮಾಡುವ ಮೂರ್ಖರಿಗೆ ಸಿಎಜಿ ವರದಿ ಸರಿಯಾಗಿ ಅರ್ಥವಾಗಿಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರಾದ ಡಾ.ಸುಧಾಕರ್ ಮತ್ತು ಅಶ್ವಥ್ನಾರಾಯಣ್ ಸುದ್ದಿಗೋಷ್ಠಿ ಮಾಡಿ ಬರೀ ಸುಳ್ಳುಗಳನ್ನು ಹೇಳಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 35 ಸಾವಿರ ಕೋಟಿ ರೂ. ಅವ್ಯವಹಾರ ಆಗಿದೆ ಎಂದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸಚಿವರ ಮೂಲಕ ಸುಳ್ಳು ಹೇಳಿಸಿದ್ದಾರೆ. ನನ್ನನ್ನು ಕಂಡರೆ ಬಿಜೆಪಿಯವರಿಗೆ ಭಯ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್ಎಸ್ಎಸ್ನ ಕೈಗೊಂಬೆಯಾಗಿದ್ದಾರೆ ಎಂದು ಲೇವಡಿ ಮಾಡಿದರು.
ಪಾಪ ಕೆ.ಸುಧಾಕರ್ಗೆ ಕಾಂಗ್ರೆಸ್ ಪಕ್ಷ ರಾಜಕೀಯ ಜೀವನ ಕೊಟ್ಟಿದೆ. ಆಪರೇಶನ್ ಕಮಲಕ್ಕೆ ಒಳಗಾಗಿ, ದುಡ್ಡಿನ ಆಸೆಗೆ ಬಿಜೆಪಿ ಸೇರಿದ್ದಾರೆ. ಸುಧಾಕರ್ ಎಂಬಿಬಿಎಸ್ ಡಾಕ್ಟರ್ ಎಂದುಕೊಂಡಿದ್ದೇನೆ. ಎಜಿ ರಿಪೋರ್ಟ್ ಅರ್ಥ ಮಾಡಿಕೊಂಡಿಲ್ಲ ಅನ್ಸುತ್ತೆ. ಅದೇ ರೀತಿ ರೀ ಕನ್ಸಿಲೇಶನ್ ರಿಪೊರ್ಟ್ ಅನ್ನು ಅರ್ಥ ಮಾಡಿಕೊಂಡಿಲ್ಲ. ಅನುದಾನ, ಖರ್ಚು ತಾಳೆ ಆಗ್ತಿದ್ಯಾ, ಇಲ್ವಾ ಅಂತಾ ನೋಡೋದು ಸಾಮಾನ್ಯ. ಎಲ್ಲಾ ಕಾಲದಲ್ಲೂ ಕೆಲವು ಪರ್ಸೆಂಟೇಜ್ ತಾಳೆ ಆಗುವುದಿಲ್ಲ. ನಾನು ವರದಿ ತರಿಸಿಕೊಂಡು ನೋಡಿದ್ದೇನೆ. ನಮ್ಮ ಅವಧಿಯ ಬಜೆಟ್ನಲ್ಲಿ ಶೇ.19ರಷ್ಟು ರೀಕನ್ಸಿಡರೇಶನ್ ಆಗಿಲ್ಲ ಎಂದು ಆಡಿಟ್ ವರದಿ ಹೇಳಿದೆ. ಅದಕ್ಕೂ ಮೊದಲು 2008-09 ರಲ್ಲಿ ಶೇ.49-87 ತಾಳೆ ಆಗಿಲ್ಲ ಅಂತಾ ಸಿಎಜಿ ರಿಪೊರ್ಟ್ ಹೇಳಿತ್ತು 2015-16 ರಲ್ಲಿ ಶೇ.16 ರೀ ಕನ್ಸಿಲೇಶನ್ ಕಡಿಮೆ ಆಗಿದೆ. ಆ ಮೂರ್ಖರಿಗೆ ಇದು ಅರ್ಥ ಆಗುತ್ತಾ ಎಂದು ವಾಗ್ದಾಳಿ ನಡೆಸಿದರು.
ತಾಳೆಯಾಗದ ಲೆಕ್ಕದ ಬಗ್ಗೆ ದೂರು ಕೊಟ್ಟರೆ ಹೇಗೆ, ಇದು ಭ್ರಷ್ಟಾಚಾರ ಅಲ್ಲ. ತಮ್ಮ ಸರ್ಕಾರದ ಅವಧಿಯಲ್ಲಿ ಹಲವು ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಬಿಜೆಪಿ ಸರ್ಕಾರ ಒಂದೆ ಒಂದು ಹಗರಣವನ್ನು ಸಿಬಿಐ ತನಿಖೆಗೆ ಕೊಟ್ಟಿಲ್ಲ. ಎಲ್ಲಾ ಕಾಲದ ಭ್ರಷ್ಟಚಾರಗಳನ್ನು ಸರ್ವೋಚ್ಚ ನ್ಯಾಯಲಯದ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರವಾದ ನ್ಯಾಯಾಂಗ ತನಿಖೆಗೆ ಒಪ್ಪಿಸಲಿ. ಅದರಲ್ಲಿ ನಮ್ಮ ಸರ್ಕಾರದ ಅವಧಿಯಲ್ಲಿನ ಆರೋಪಗಳನ್ನು ಸೇರಿಸಿ ತನಿಖೆ ಮಾಡಿಸಿ ಎಂದು ಒತ್ತಾಯಿಸಿದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸಾದ್ರೆ 5 ಸಾವಿರ ರೂ. ಪ್ರೋತ್ಸಾಹ ಧನ
Next Article ಫೆ.10ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭ