Mysore
33
few clouds

Social Media

ಬುಧವಾರ, 16 ಏಪ್ರಿಲ 2025
Light
Dark

ಸಂಸದೆ ಸುಮಲತಾ ಸಮಾಧಾನದಿಂದ ಇರಬೇಕು, ಒಳ್ಳೆ ಸ್ಥಾನಮಾನ ದೊರೆಯಲಿದೆ: ಬಿಎಸ್‌ ಯಡಿಯೂರಪ್ಪ

ಬೆಳಗಾವಿ: ಮಂಡ್ಯದಿಂದ ಕುಮಾರಸ್ವಾಮಿಗೆ ಟಿಕೆಟ್‌ ದೊರೆತ ಬಳಿಕ ಸಹಜವಾಗಿ ಸಂಸದೆ ಸುಮಲತಾಗೆ ಬೇಸರ ಆಗಿರುತ್ತದೆ. ಸುಮಲತಾ ಅವರು ತಾಳ್ಮೆಯಿಂದ ಇದ್ದರೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗುವ ಭರವಸೆಯನ್ನು ಹೈಕಮಾಂಡ್‌ ಕೊಟ್ಟಿದೆ ಎಂದು ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ.

ಬೆಳಗಾವಿಯಲ್ಲಿ ಜಗದೀಶ್‌ ಶೆಟ್ಟರ್‌ ಗೆಲ್ಲಿಸುವ ಸಂಬಂಧ ಸಭೆ ಮಾಡಿದ್ದೇವೆ. ಎಲ್ಲರೂ ಒಂದಾಗಿ ಶೆಟ್ಟರ್‌ ಅವರನ್ನು ಹೆಚ್ಚಿನ ಅಂತರದಲ್ಲಿ ಗೆಲ್ಲಿಸಬೇಕು. ರಾಜ್ಯದ 28 ಕ್ಷೇತ್ರದಲ್ಲೂ ಮೈತ್ರಿ ಅಭ್ಯರ್ಥಿ ಗೆಲ್ಲಲಿದ್ದಾರೆ. ಎಲ್ಲಿಯೂ ಅಸಮಾಧಾನ ಇಲ್ಲ. ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಪ್ರಚಾರಕ್ಕಾಗಿ ಎಲ್ಲಾ ಸ್ಥಳಗಳಿಗೆ ತೆರಳಲು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.

ಜಗದೀಶ್‌ ಶೆಟ್ಟರ್‌ ಅವರು ಒಳ್ಳೆಯ ನಾಯಕ, ಆದ್ದರಿಂದ ನಾವು ಅವರನ್ನು ಒತ್ತಾಯಿಸಿ ವಾಪಸ್‌ ಬಿಜೆಪಿಗೆ ಕರೆಸಿಕೊಂಡಿದ್ದೇವೆ. ಇದೀಗ ಅವರು ತುಂಬಾ ಉತ್ಸುಕತೆಯಿಂದ ಲೋಕಸಭೆಗೆ ಸ್ಪರ್ಧಿಸುತ್ತಿದ್ದು, ಎಲ್ಲರೂ ಒಗ್ಗಟ್ಟಾಗಿಯೇ ಕೆಲಸ ಮಾಡುತ್ತಿದ್ದೇವೆ. ಬೆಳಗಾವಿಯ ಎರಡು ಕ್ಷೇತ್ರಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರವನ್ನು ಟೀಕಿಸುವ ಸಿದ್ದರಾಮಯ್ಯ ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕು. ಪ್ರಧಾನಿ ಟೀಕಿಸುವ ಮೂಲಕ ಸಿದ್ದರಾಮಯ್ಯ ದೊಡ್ಡ ನಾಯಕರಾಗುತ್ತಾರೆ ಎಂದು ಯೋಚಿಸುತ್ತಿರಬಹುದು. ಕೇಂದ್ರದಿಂದ ಕರ್ನಾಟಕಕ್ಕೆ ಬರಬೇಕಿದ್ದ ಬರ ಪರಿಹಾರ ಹಣ ಬಂದಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಸ್ಪಷ್ಟಪಡಿಸಿದ ನಂತರವೂ ಅವರು ಕೇಂದ್ರದ ವಿರುದ್ಧ ಆರೋಪ ಮಾಡುವುದು ಸರಿಯಲ್ಲ ಎಂದರು.

Tags: