ರಾಜಕೀಯ

ಸಂಸದೆ ಸುಮಲತಾ ಸಮಾಧಾನದಿಂದ ಇರಬೇಕು, ಒಳ್ಳೆ ಸ್ಥಾನಮಾನ ದೊರೆಯಲಿದೆ: ಬಿಎಸ್‌ ಯಡಿಯೂರಪ್ಪ

ಬೆಳಗಾವಿ: ಮಂಡ್ಯದಿಂದ ಕುಮಾರಸ್ವಾಮಿಗೆ ಟಿಕೆಟ್‌ ದೊರೆತ ಬಳಿಕ ಸಹಜವಾಗಿ ಸಂಸದೆ ಸುಮಲತಾಗೆ ಬೇಸರ ಆಗಿರುತ್ತದೆ. ಸುಮಲತಾ ಅವರು ತಾಳ್ಮೆಯಿಂದ ಇದ್ದರೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗುವ ಭರವಸೆಯನ್ನು ಹೈಕಮಾಂಡ್‌ ಕೊಟ್ಟಿದೆ ಎಂದು ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ.

ಬೆಳಗಾವಿಯಲ್ಲಿ ಜಗದೀಶ್‌ ಶೆಟ್ಟರ್‌ ಗೆಲ್ಲಿಸುವ ಸಂಬಂಧ ಸಭೆ ಮಾಡಿದ್ದೇವೆ. ಎಲ್ಲರೂ ಒಂದಾಗಿ ಶೆಟ್ಟರ್‌ ಅವರನ್ನು ಹೆಚ್ಚಿನ ಅಂತರದಲ್ಲಿ ಗೆಲ್ಲಿಸಬೇಕು. ರಾಜ್ಯದ 28 ಕ್ಷೇತ್ರದಲ್ಲೂ ಮೈತ್ರಿ ಅಭ್ಯರ್ಥಿ ಗೆಲ್ಲಲಿದ್ದಾರೆ. ಎಲ್ಲಿಯೂ ಅಸಮಾಧಾನ ಇಲ್ಲ. ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಪ್ರಚಾರಕ್ಕಾಗಿ ಎಲ್ಲಾ ಸ್ಥಳಗಳಿಗೆ ತೆರಳಲು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.

ಜಗದೀಶ್‌ ಶೆಟ್ಟರ್‌ ಅವರು ಒಳ್ಳೆಯ ನಾಯಕ, ಆದ್ದರಿಂದ ನಾವು ಅವರನ್ನು ಒತ್ತಾಯಿಸಿ ವಾಪಸ್‌ ಬಿಜೆಪಿಗೆ ಕರೆಸಿಕೊಂಡಿದ್ದೇವೆ. ಇದೀಗ ಅವರು ತುಂಬಾ ಉತ್ಸುಕತೆಯಿಂದ ಲೋಕಸಭೆಗೆ ಸ್ಪರ್ಧಿಸುತ್ತಿದ್ದು, ಎಲ್ಲರೂ ಒಗ್ಗಟ್ಟಾಗಿಯೇ ಕೆಲಸ ಮಾಡುತ್ತಿದ್ದೇವೆ. ಬೆಳಗಾವಿಯ ಎರಡು ಕ್ಷೇತ್ರಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರವನ್ನು ಟೀಕಿಸುವ ಸಿದ್ದರಾಮಯ್ಯ ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕು. ಪ್ರಧಾನಿ ಟೀಕಿಸುವ ಮೂಲಕ ಸಿದ್ದರಾಮಯ್ಯ ದೊಡ್ಡ ನಾಯಕರಾಗುತ್ತಾರೆ ಎಂದು ಯೋಚಿಸುತ್ತಿರಬಹುದು. ಕೇಂದ್ರದಿಂದ ಕರ್ನಾಟಕಕ್ಕೆ ಬರಬೇಕಿದ್ದ ಬರ ಪರಿಹಾರ ಹಣ ಬಂದಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಸ್ಪಷ್ಟಪಡಿಸಿದ ನಂತರವೂ ಅವರು ಕೇಂದ್ರದ ವಿರುದ್ಧ ಆರೋಪ ಮಾಡುವುದು ಸರಿಯಲ್ಲ ಎಂದರು.

andolana

Recent Posts

ಸಿಎಂ ಹಾಗೂ ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…

1 hour ago

ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭ: ಡಿಸಿಎಂ ಡಿಕೆಶಿಗೆ ಕೇಂದ್ರ ಸರ್ಕಾರ ಆಹ್ವಾನ

ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…

1 hour ago

ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ಅರೆಸ್ಟ್‌

ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್‌ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ…

2 hours ago

ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡ ಬೊಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…

3 hours ago

ನಾಲ್ವರ ಹತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ: ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ

ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…

3 hours ago

ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆ

ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…

3 hours ago