Mysore
24
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಅಧುಕೃತವಾಗಿ ಬಿಜೆಪಿ ಸೇರ್ಪಡೆಗೊಂಡ ಸುಮಲತಾ ಅಂಬರೀಶ್‌ !

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದ ಬೆನ್ನಲ್ಲೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುಮಲತಾ ಅವರಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೇಸರಿ ಶಾಲು ಹಾಕಿ ಬಿಜೆಪಿ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಹಲವಾರು ಮುಖಂಡರು ಕಾರ್ಯಕರ್ತರು ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.

ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿಯದಂತಹ ರಾಧಾ ಮೋಹನ್ ದಾಸ್ ಅಗರ್ವಾಲ್, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಡಿವಿ ಸದಾನಂದ ಗೌಡ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ರಾಜ ಬಿಜೆಪಿ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಸಿಟಿ ರವಿ ಸುಮಲತಾ ಪುತ್ರ ಅಂಬರೀಶ್ ರಾಕ್ ಲೈನ್ ವೆಂಕಟೇಶ್ ಮಂಡ್ಯ ಜಿಲ್ಲೆಯ ಹಲವು ಮುಖಂಡರು ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

Tags:
error: Content is protected !!