ಕಳೆದ ವರ್ಷದ ಏಪ್ರಿಲ್ 13ರಂದು ವಿ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿಯನ್ನು ಘೋಷಿಸುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಚಾಮರಾಜನಗರದ ಹಾಲಿ ಸಂಸದನಾಗಿರುವ ವಿ ಶ್ರೀನಿವಾಸ್ ಪ್ರಸಾದ್ ಬದಲು ಈ ಬಾರಿಯ ಲೋಕಸಭೆ ಚುನಾವಣೆಗೆ ಯಾವ ಸ್ಪರ್ಧಿ ಬಿಜೆಪಿಯನ್ನು ಪ್ರತಿನಿಧಿಸಬಹುದು ಎಂದು ಪ್ರಶ್ನೆಯೂ ಸಹ ಎದ್ದಿತ್ತು.
ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ಇದೀಗ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಮೋಹನ್ ಮಾತನಾಡಿದ್ದು, ತಾವು ಲೋಕಸಭೆ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ಧನಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.
ಹೌದು, ಬೆಂಗಳೂರಿನ ಸಂಜಯ ಗಾಂಧಿ ಆಸ್ಪತ್ರೆಯಲ್ಲಿ ಬೆನ್ನುಹುರಿ ತಜ್ಞನಾಗಿ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಮೋಹನ್ ಅವರು ಜನರ ಸೇವೆ ಮಾಡಲು ಜನರ ಸೇವೆ ಮಾಡಲು ರಾಜಕೀಯ ಕ್ಷೇತ್ರ, ಇದಕ್ಕಾಗಿ ಜನಪ್ರತಿನಿಧಿಯಾಗಬೇಕೆಂಬ ತೀರ್ಮಾನ ಮಾಡಬೇಕು ಎಂದಿದ್ದಾರೆ. ಇದಕ್ಕಾಗಿ ಬಿಜೆಪಿಯ ಮುಖಂಡರನ್ನೂ ಸಹ ಈಗಾಗಲೇ ಭೇಟಿ ಮಾಡಿ ತನ್ನ ಇಂಗಿತವನ್ನೂ ಸಹ ವ್ಯಕ್ತಪಡಿಸಿದ್ದೇನೆ ಎಂದು ತಿಳಿಸಿದ ಮೋಹನ್ ಮೀಸಲಾತಿ ಕ್ಷೇತ್ರವಾಗಿರುವ ಚಾಮರಾಜನಗರದಲ್ಲಿ ಕೈಗಾರಿಕೆ ಹಾಗೂ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವುದು ತನ್ನ ದೂರದೃಷ್ಠಿ ಎಂದು ಹೇಳಿಕೊಂಡರು.
ಇನ್ನು ಇದನ್ನೆಲ್ಲಾ ಪಕ್ಷದ ಮುಖಂಡರ ಜತೆ ಚರ್ಚಿಸಿದ್ದೇನೆ, ಅವರೂ ಸಹ ಇದಕ್ಕೆ ಸಹಮತ ಸೂಚಿಸಿದ್ದಾರೆ, ಅವರೂ ಸಹ ಪ್ರಯತ್ನ ಪಡ್ತಾರೆ, ಜನಗಳ ಅಭಿಪ್ರಾಯ ತೆಗೆದುಕೊಂಡು, ಸೂಕ್ತ ಸಮಯದಲ್ಲಿ ನಿರ್ಧಾರ ಮಾಡಿ ಟಿಕೆಟ್ ಕೊಟ್ಟು ಗೆಲ್ಲಿಸುವ ಭರವಸೆಯನ್ನು ಪಕ್ಷ ಕೊಟ್ಟಿದೆ ಎಂದು ಮೋಹನ್ ಹೇಳಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…