ಕಾಡುಗಳ್ಳ ಎಂದೇ ಕುಖ್ಯಾತಿಯನ್ನು ಹೊಂದಿದ್ದ ವೀರಪ್ಪನ್ ಪುತ್ರಿ ವಿದ್ಯಾರಾಣಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರದಲ್ಲಿ ಎನ್‌ಟಿಕೆ ( ನಾಮ್ ತಮಿಳರ್ ಕಚ್ಚಿ ) ಪಕ್ಷದಿಂದ ವಿದ್ಯಾರಾಣಿ ಸ್ಪರ್ಧೆಗೆ ಇಳಿದಿದ್ದಾರೆ.
ತಮಿಳುನಾಡು ಬಿಜೆಪಿ ಯುವ ಘಟಕದ ಉಪಾಧ್ಯಕ್ಷೆಯಾಗಿದ್ದ ವೀರಪ್ಪನ್ ಪುತ್ರಿ ಇದೇ ಕೃಷ್ಣಗಿರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಬಹುದು ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಎನ್‌ಟಿಕೆ ಪಕ್ಷದ ಅಭ್ಯರ್ಥಿಯಾಗಿ ವಿದ್ಯಾರಾಣಿ ಕಣಕ್ಕಿಳಿದಿದ್ದು, ನಿನ್ನೆ ( ಮಾರ್ಚ್ 24 ) ಸಿ.ನರಸಿಂಹನ್ ಎಂಬುವವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.
ಇನ್ನು ಟಿಕೆಟ್ ಘೋಷಣೆ ಮಾಡಿದ ಬಳಿಕ ಮಾತನಾಡಿದ ಎನ್‌ಟಿಕೆ ಪಕ್ಷದ ಮುಖ್ಯಸ್ಥ ಸೀಮನ್ ʼಅವರ ತಂದೆ ಅರಣ್ಯವನ್ನು ರಕ್ಷಿಸಿದ್ದರು. ಅವರ ಮಗಳು ಈಗ ತಮಿಳರನ್ನು ರಕ್ಷಿಸುತ್ತಿದ್ದಾರೆʼ ಎಂದು ಹೇಳಿಕೆಯನ್ನು ನೀಡಿದರು.
ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…
ಮಹಾದೇಶ್ ಎಂ.ಗೌಡ ಹನೂರು: ಚಾಮರಾಜನಗರ ಜಿಲ್ಲೆಯಲ್ಲಿ ಸಫಾರಿ ಎಂದರೆ ನೆನಪಾಗುವುದು ಬಂಡೀಪುರ, ಕೆ.ಗುಡಿ ಮಾತ್ರ. ಇತ್ತೀಚಿನ ದಿನಗಳಲ್ಲಿ ಹನೂರು ತಾಲ್ಲೂಕಿನ…
ರಾಜೇಶ್ ಬೆಂಡರವಾಡಿ ಚಾಮರಾಜೇಶ್ವರ ದೇವಸ್ಥಾನಕ್ಕೆ ಸೇರಿದ ಈ ಕಟ್ಟಡದಲ್ಲಿ ಬೆಳೆದಿದೆ ಅರಳಿಮರ; ಶೀಘ್ರದಲ್ಲಿ ಕಟ್ಟಡ ತೆರವುಗೊಳಿಸಲು ಆಗ್ರಹ ಚಾಮರಾಜನಗರ: ಇಲ್ಲಿನ…
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭವ್ಯ ಪಾರಂಪರಿಕ ಕಟ್ಟಡ, ದೊಡ್ಡ ಬಾಗಿಲು-ಕಿಟಕಿಗಳೊಂದಿಗೆ ಇನ್ನೂ ಗಟ್ಟಿಯಾಗಿ…
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…