Mysore
13
scattered clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ವಿಜಯೇಂದ್ರ ಪ್ರಜಾಪ್ರಭುತ್ವದ ಮಾದರಿಯಲ್ಲಿ ಆಯ್ಕೆಯಾಗಿದ್ದಾರೆ : ಅಣ್ಣಾಮಲೈ

ಹೈದರಾಬಾದ್ : ವಿಜಯೇಂದ್ರ ಅವರು ಪಕ್ಷದ ಯುವ ನಾಯಕನಾಗಿ ಎಲ್ಲಾ ಕಾರ್ಯಕರ್ತರ ವಿಶ್ವಾಸವನ್ನು ಗಳಿಸಿದ್ದಾರೆ. ಅವರು ಯಡಿಯೂರಪ್ಪನವರ ಪುತ್ರನೇ ಇರಬಹುದು ಆದರೆ ಯುವ ಮೋರ್ಚಾದ ಅಧ್ಯಕ್ಷನಾಗಿ ಬಿಜೆಪಿ ಪಕ್ಷದ ಎಲ್ಲಾ ಕಾರ್ಯಕರ್ತರ ವಿಶ್ವಾಸವನ್ನು ಗಳಿಸಿಕೊಂಡಿದ್ದಾರೆ ಎಂದು ಬಿ ವೈ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿರುವುದನ್ನು ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಸಮರ್ಥಿಸಿಕೊಂಡಿದ್ದಾರೆ.

ತೆಲಂಗಾಣದಲ್ಲಿ ಪಕ್ಷದ ಪರ ಪ್ರಚಾರ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

ತಮಿಳುನಾಡು ಮತ್ತು ತೆಲಂಗಾಣದಲ್ಲಿ ಪರಿವಾರ ಯಾವ ರೀತಿ ಇದೆ ಎಂದರೆ, ಒಂದೇ ಕುಟುಂಬದ ಹಲವರು ಪ್ರಭಾವಿ ಹುದ್ದೆಗಳನ್ನು ಅಲಂಕರಿಸುತ್ತಾರೆ. ವಿಜಯೇಂದ್ರ ಅವರು ದೀರ್ಘಕಾಲ ಪಕ್ಷಕ್ಕಾಗಿ ದುಡಿದಿದ್ದಾರೆ. ಅವರು ಪ್ರಜಾಪ್ರಭುತ್ವದ ಮಾದರಿಯಲ್ಲಿ ಆಯ್ಕೆಯಾಗಿದ್ದಾರೆ ಎಂದಿದ್ದಾರೆ.

ಹಲವು ದಿನಗಳಿಂದ ಖಾಲಿ ಇದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗಷ್ಟೇ ಬಿ.ವೈ ವಿಜಯೇಂದ್ರ ನೇಮಕಗೊಂಡಿದ್ದರು. ರಾಜ್ಯ ಬಿಜೆಪಿಯ 11 ಅಧ್ಯಕ್ಷರಾಗಿ ಶಾಸಕ ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದರು. ಕರ್ನಾಟಕ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ನಳೀನ್‌ ಕುಮಾರ್‌ ಕಟೀಲ್‌ ಅವರು ಪಕ್ಷದ ಬಾವುಟ ನೀಡಿ ಅಧಿಕಾರ ಹಸ್ತಾಂತರ ಮಾಡಿದ್ದರು.

ಇನ್ನು ತಮಗೆ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿರುವುದರ ಬಗ್ಗೆ ಪ್ರತಿಕ್ರಿಯಿಸಿದ್ದ ವಿಜಯೇಂದ್ರ, ಯುವಕರಿಗೆ ಅವಕಾಶ ಕೊಡಬೇಕು ಎಂದು ನನ್ನನ್ನು ಬಿಜೆಪಿ ರಾಜ್ಯಾಧ್ಯಕ್ಷನನ್ನಾಗಿ ನೇಮಕ ಮಾಡಿದ್ದಾರೆ. ನಾನು ವಿಜಯೇಂದ್ರ ಎಂದಾಗಲಿ ಅಥವಾ ಯಡಿಯೂರಪ್ಪನವರ ಮಗ ಎಂದಾಗಲಿ ನನ್ನನ್ನು ಆಯ್ಕೆ ಮಾಡಿಲ್ಲ. ಯಾರಿಗೆ ರಾಜ್ಯಾಧ್ಯಕ್ಷರ ಸ್ಥಾನವನ್ನು ನೀಡಬೇಕು ಎಂಬುದರ ಬಗ್ಗೆ ಭಾರೀ ಚರ್ಚೆಗಳು ನಡೆದಿದ್ದವು. ಅಂತಿಮವಾಗಿ ನನಗೆ ಈ ಜವಬ್ದಾರಿ ಕೊಟ್ಟಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!