ಹೈದರಾಬಾದ್ : ವಿಜಯೇಂದ್ರ ಅವರು ಪಕ್ಷದ ಯುವ ನಾಯಕನಾಗಿ ಎಲ್ಲಾ ಕಾರ್ಯಕರ್ತರ ವಿಶ್ವಾಸವನ್ನು ಗಳಿಸಿದ್ದಾರೆ. ಅವರು ಯಡಿಯೂರಪ್ಪನವರ ಪುತ್ರನೇ ಇರಬಹುದು ಆದರೆ ಯುವ ಮೋರ್ಚಾದ ಅಧ್ಯಕ್ಷನಾಗಿ ಬಿಜೆಪಿ ಪಕ್ಷದ ಎಲ್ಲಾ ಕಾರ್ಯಕರ್ತರ ವಿಶ್ವಾಸವನ್ನು ಗಳಿಸಿಕೊಂಡಿದ್ದಾರೆ ಎಂದು ಬಿ ವೈ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿರುವುದನ್ನು ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಸಮರ್ಥಿಸಿಕೊಂಡಿದ್ದಾರೆ.
ತೆಲಂಗಾಣದಲ್ಲಿ ಪಕ್ಷದ ಪರ ಪ್ರಚಾರ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.
ತಮಿಳುನಾಡು ಮತ್ತು ತೆಲಂಗಾಣದಲ್ಲಿ ಪರಿವಾರ ಯಾವ ರೀತಿ ಇದೆ ಎಂದರೆ, ಒಂದೇ ಕುಟುಂಬದ ಹಲವರು ಪ್ರಭಾವಿ ಹುದ್ದೆಗಳನ್ನು ಅಲಂಕರಿಸುತ್ತಾರೆ. ವಿಜಯೇಂದ್ರ ಅವರು ದೀರ್ಘಕಾಲ ಪಕ್ಷಕ್ಕಾಗಿ ದುಡಿದಿದ್ದಾರೆ. ಅವರು ಪ್ರಜಾಪ್ರಭುತ್ವದ ಮಾದರಿಯಲ್ಲಿ ಆಯ್ಕೆಯಾಗಿದ್ದಾರೆ ಎಂದಿದ್ದಾರೆ.
ಹಲವು ದಿನಗಳಿಂದ ಖಾಲಿ ಇದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗಷ್ಟೇ ಬಿ.ವೈ ವಿಜಯೇಂದ್ರ ನೇಮಕಗೊಂಡಿದ್ದರು. ರಾಜ್ಯ ಬಿಜೆಪಿಯ 11 ಅಧ್ಯಕ್ಷರಾಗಿ ಶಾಸಕ ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದರು. ಕರ್ನಾಟಕ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ನಳೀನ್ ಕುಮಾರ್ ಕಟೀಲ್ ಅವರು ಪಕ್ಷದ ಬಾವುಟ ನೀಡಿ ಅಧಿಕಾರ ಹಸ್ತಾಂತರ ಮಾಡಿದ್ದರು.
ಇನ್ನು ತಮಗೆ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿರುವುದರ ಬಗ್ಗೆ ಪ್ರತಿಕ್ರಿಯಿಸಿದ್ದ ವಿಜಯೇಂದ್ರ, ಯುವಕರಿಗೆ ಅವಕಾಶ ಕೊಡಬೇಕು ಎಂದು ನನ್ನನ್ನು ಬಿಜೆಪಿ ರಾಜ್ಯಾಧ್ಯಕ್ಷನನ್ನಾಗಿ ನೇಮಕ ಮಾಡಿದ್ದಾರೆ. ನಾನು ವಿಜಯೇಂದ್ರ ಎಂದಾಗಲಿ ಅಥವಾ ಯಡಿಯೂರಪ್ಪನವರ ಮಗ ಎಂದಾಗಲಿ ನನ್ನನ್ನು ಆಯ್ಕೆ ಮಾಡಿಲ್ಲ. ಯಾರಿಗೆ ರಾಜ್ಯಾಧ್ಯಕ್ಷರ ಸ್ಥಾನವನ್ನು ನೀಡಬೇಕು ಎಂಬುದರ ಬಗ್ಗೆ ಭಾರೀ ಚರ್ಚೆಗಳು ನಡೆದಿದ್ದವು. ಅಂತಿಮವಾಗಿ ನನಗೆ ಈ ಜವಬ್ದಾರಿ ಕೊಟ್ಟಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು.
ನವದೆಹಲಿ: ಅರ್ನಾಬ್ ಚಂಡಮಾರುತದ ಅಬ್ಬರಕ್ಕೆ ಆಂಧ್ರಪ್ರದೇಶ ಹಾಗೂ ಒಡಿಶಾದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ. ಚಂಡಮಾರುತ ಸಂಬಂಧಿತ ಘಟನೆಗಳಲ್ಲಿ ಸಾವಿನ ಸಂಖ್ಯೆ…
ಬೆಂಗಳೂರು: ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್, ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.…
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ತಾಯಿ ಹಾಸನಾಂಬೆಯ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ. ಹಾಸನದಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆ…
ಬೆಂಗಳೂರು: ರಾಜ್ಯದಲ್ಲಿ ಒಂದೇ ವಾರದಲ್ಲಿ 702 ಹಾವು ಕಡಿತ ಪ್ರಕರಣಗಳು ದಾಖಲಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲೂ…
ನವದೆಹಲಿ: ರೈಲಿನಲ್ಲಿ ಪ್ರಯಾಣಿಸುವವರೇ ಗಮನಿಸಿ! ರಾತ್ರಿ ಪ್ರಯಾಣದ ವೇಳೆ ಮೊಬೈಲ್ ಚಾರ್ಜ್ ಮಾಡಿಕೊಳ್ಳುವ ಯೋಚನೆಯಿದ್ದರೆ ಈ ಮಾಹಿತಿ ತಿಳಿದುಕೊಳ್ಳಿ. ರಾತ್ರಿ…
ಮೈಸೂರಿನ ವಿಜಯನಗರ ರೈಲ್ವೆ ಬಡಾವಣೆಯ ಹತ್ತನೇ ಕ್ರಾಸ್ ಮತ್ತು ಇತರೆ ಕ್ರಾಸ್ ರಸ್ತೆಗಳಲ್ಲಿ ಮನೆಗಳ ಮುಂದೆ ಕಾರುಗಳನ್ನು ನಿಲ್ಲಿಸುತ್ತಿದ್ದು, ಕಳೆದ…